ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ : ಜಗದೀಶ್ ಆಳ್ವ ಮೆಚ್ಚುಗೆ

ಬಿಜೆಪಿ ಮಂಗಳೂರು ವಿಧಾನಸಭಾಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದರು.
ಬಿಜೆಪಿ ಮಂಗಳೂರು ವಿಧಾನಸಭಾಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದರು.
Published on

ಉಳ್ಳಾಲ: ಶಾಲೆಯ ಶಿಕ್ಷಕ ವೃಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಲು ಸಾಧ್ಯವಾಗಿದೆ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಶ್ಲಾಘಿಸಿದರು.

ಬಾಳೆಪುಣಿ ಗ್ರಾಮದ ಹೂಹಾಕುವಕಲ್ಲು ಪಿಎಂಶ್ರೀ ದ.ಕ. ಜಿಲ್ಲಾ ಪಂಚಾಯಿತಿ ಉನ್ನತೀಕರಿಸಿದ ಶಾಲೆಯಲ್ಲಿ ಶನಿವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯಲ್ಲಿ ಶಿಕ್ಷಕ ವರ್ಗ ತಂಡವಾಗಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ನಡೆಯುವ ಅಭಿವೃದ್ಧಿ ಕೆಲಸಗಳಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಕಬ್ಸ್ ತರಬೇತುದಾರ ಎಂ.ರಾಮ್ ರಾವ್ ಅವರನ್ನು ಅಭಿನಂದಿಸಲಾಯಿತು. ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಭಂಡಾರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಫಿ, ಬಾಳೆಪುಣಿ ಗ್ರಾಮ ಪಂಚಾಯಿತಿ ಸದಸ್ಯರಾದ ಹನೀಫ್ ಬಾಳೆಪುಣಿ, ಶಮೀಮಾ, ಶಾಲಾಭಿವೃದ್ಧಿ ಸಮಿತಿ ಸದಸ್ಯೆ ನಸೀಮಾ, ಗೌರವ ಸಲಹೆಗಾರ ಅಬೂಬಕ್ಕರ್, ಶಾರದಾ ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ ಸ್ವಾಗತಿಸಿದರು. ಸಹಶಿಕ್ಷಕಿಯರಾದ ರಂಜಿನಿ ವಂದಿಸಿದರು. ಸುಮನಾ ಹಾಗೂ ಸುಶಾಂತಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net