ಎಲ್ಲ ಧರ್ಮಗಳ ಸಾರ ಮಾನವೀಯತೆ

ಸರ್ವಧರ್ಮ ಅರಿವು ಸಮ್ಮಿಲನ
 ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸರ್ವಧರ್ಮ ಅರಿವು ಸಮ್ಮಿಲನ ಕಾರ್ಯಕ್ರಮವನ್ನು ಎಡನೀರು ಸ್ವಾಮೀಜಿ ಉದ್ಘಾಟಿಸಿದರು. ಪದುವಾ ಕಾಲೇಜ್ ಆ್ ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಮಂಗಳೂರು ಪ್ರಾಂಶುಪಾಲ ಅರುಣ್ ವಿಲ್ಸನ್ ಲೋಬೋ, ಪುತ್ತೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಅಬ್ದುಲ್ ರಜಾಕ್ ಅನಂತಾಡಿ ಮೊದಲಾದವರಿದ್ದರು.

Published on: 

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಎಲ್ಲ ಧರ್ಮಗಳು ಸತ್ಯ, ಅಹಿಂಸೆ, ಶಾಂತಿ, ಪ್ರೀತಿ, ಮಾನವೀಯತೆಯನ್ನು ಸಾರುತ್ತವೆ. ಸ್ವಧರ್ಮದ ಬಗ್ಗೆ ಗೌರವದೊಂದಿಗೆ ಪರಧರ್ಮದ ಬಗ್ಗೆ ಪ್ರೀತಿ, ಗೌರವ ಹೊಂದಬೇಕು. ಧರ್ಮ ಮನುಷ್ಯನನ್ನು ಸನ್ಮಾರ್ಗದಲ್ಲಿ ನಡೆಸುವ ಜೀವನ ಮೌಲ್ಯ ಎಂದು ಶ್ರೀ ಶಂಕರಾಚಾರ್ಯ ಶ್ರೀ ತೋಟಕಾಚಾರ್ಯ ಸಂಸ್ಥಾನಮ್, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಹೇಳಿದರು.

ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಸರ್ವಧರ್ಮ ಅರಿವು ಸಮ್ಮಿಲನ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಪದುವಾ ಕಾಲೇಜ್ ಆ್ ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಮಂಗಳೂರು ಪ್ರಾಂಶುಪಾಲ ರೆ.ಾ.ಅರುಣ್ ವಿಲ್ಸನ್ ಲೋಬೋ, ಪುತ್ತೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಅಬ್ದುಲ್ ರಜಾಕ್ ಅನಂತಾಡಿ, ಮೂಡುಬಿದಿರೆ ಜೈನ ಪ್ರೌಢಶಾಲೆ ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಮಾತನಾಡಿದರು.

ಹಳೇ ವಿದ್ಯಾರ್ಥಿನಿ ಮೌಲ್ಯ ವೈ.ಆರ್.ಜೈನ್ ಹಾಡಿದ ಒಲವೇ ನನ್ನೊಲವೇ ಆಲ್ಬಮ್ ಗೀತೆಯನ್ನು ಸ್ವಾಮೀಜಿ ಬಿಡುಗಡೆಗೊಳಿಸಿದರು. ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಡಳಿತ ನಿರ್ದೇಶಕ ಡಾ.ಬಿ.ಪಿ.ಸಂಪತ್ ಕುಮಾರ್, ಪ್ರಾಂಶುಪಾಲ ಪುಷ್ಪರಾಜ್ ಬಿ., ಎಕ್ಸಲೆಂಟ್ ಹೈಸ್ಕೂಲ್ ಮುಖ್ಯ ಶಿಕ್ಷಕ ಶಿವಪ್ರಸಾದ ಭಟ್, ಎಕ್ಸಲೆಂಟ್ ಸಿಬಿಎಸ್‌ಸಿ ಪ್ರಾಂಶುಪಾಲ ಶ್ರೀಪ್ರಸಾದ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net