

ಬೆಳ್ತಂಗಡಿ: ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಯಾವುದೇ ಸರ್ಕಾರಿ ಅನುದಾನವಿಲ್ಲದೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆ ಮತ್ತು ಫಲಿತಾಂಶದಲ್ಲೂ ಮುಂಚೂಣಿಯಲ್ಲಿವೆ. ಆದರೂ ಶಿಕ್ಷಣ ಕ್ಷೇತ್ರದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಬೇಸರದ ಸಂಗತಿ. ಪಠ್ಯಕ್ರಮ ಬದಲಾವಣೆ ಸೇರಿದಂತೆ ಶಿಕ್ಷಣ ಕ್ಷೇತ್ರದ ನಿರ್ಧಾರಗಳು ವಿದ್ಯಾರ್ಥಿಗಳು ಹಾಗೂ ಸಂಸ್ಥೆಗಳ ಮೇಲೆ ಪರಿಣಾಮ ಬೀರುತ್ತವೆ. ಹೀಗಾಗಿ ಶಿಕ್ಷಣ ತಜ್ಞರು ಮತ್ತು ಸಂಸ್ಥೆಗಳ ಪ್ರತಿನಿಧಿಗಳ ಸಲಹೆ ಪಡೆದು ಪಾರದರ್ಶಕವಾಗಿ ಬದಲಾವಣೆಗಳನ್ನು ಜಾರಿಗೊಳಿಸಬೇಕು ಎಂದು ಕುಪ್ಮಾ ರಾಜ್ಯ ಸಮಿತಿ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದರು.
ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂದ (ಕುಪ್ಮಾ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿಯ ಸಿರಿ ವಾತೃಶ್ರೀ ಕೈಗಾರಿಕಾ ಪಾರ್ಕ್ನ ಸಭಾಂಗಣದಲ್ಲಿ ಮಂಗಳವಾರ ನಡೆದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸವಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಕುಪ್ಮಾ ರಾಜ್ಯ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ವಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಬದಲಾವಣೆಗಳು ಮತ್ತು ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ಇದರಿಂದ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸಂಕಷ್ಟ ಅನುಭವಿಸುತ್ತಿವೆ. ಕೋವಿಡ್ ಅವಧಿಯಲ್ಲಿ ಶುಲ್ಕ ಸಂಗ್ರಹವಾಗದೆ ಸಂಸ್ಥೆಗಳು ತೀವ್ರ ತೊಂದರೆಗೀಡಾಗಿದ್ದವು. ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕುಪ್ಮಾ ಸ್ಥಾಪನೆಯಾಗಿದ್ದು, ಕಳೆದ ಎರಡೂವರೆ ವರ್ಷಗಳಲ್ಲಿ ಮಹತ್ವದ ಸಾಧನೆ ವಾಡಿದೆ ಎಂದರು.
ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಪ್ರೊ.ಅನಿಲ್ ಮಸ್ಕರೇನಸ್, ಮೂಡುಬಿದಿರೆ ಎಕ್ಸ್ಲೆಂಟ್ ಕಾಲೇಜಿನ ಜೀವಶಾಸ ಉಪನ್ಯಾಸಕ ಡಾ.ಪ್ರಶಾಂತ ರಾಮಚಂದ್ರ ಹೆಗ್ಡೆ, ಉಜಿರೆ ಎಸ್ಡಿಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕ ಡಾ.ಪ್ರಸನ್ನ ಕುವಾರ್ ಐತಾಳ್, ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ್ ನಾಯಕ್ ಕೆ., ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಯಶೋದಾ ಯು.ಶೆಟ್ಟಿ ಹಾಗೂ ಮಂಗಳೂರು ಎಕ್ಸ್ಪರ್ಟ್ ಪಿಯು ಕಾಲೇಜಿನ ಕನ್ನಡ ಉಪನ್ಯಾಸಕ ಕರುಣಾಕರ ಬಳ್ಳೂರು ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಜನಾರ್ದನ ಅವರನ್ನು ಸನ್ಮಾನಿಸಲಾಯಿತು. ಕುಪ್ಮಾ ರಾಜ್ಯ ಸಮಿತಿ ಗೌರವಾಧ್ಯಕ್ಷ ಡಾ.ಕೆ.ಸಿ.ನಾಯ್ಕ, ಉಪಾಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಜಂಟಿ ಕಾರ್ಯದರ್ಶಿ ವಿಶ್ವನಾಥ ಶೇಷಾಚಲ, ದ.ಕ. ಜಿಲ್ಲಾ ಸಮಿತಿ ಗೌರವಾಧ್ಯಕ್ಷ ಡಾ.ಸಂಜೀವ ರೈ ಉಪಸ್ಥಿತರಿದ್ದರು.
ಜಿಲ್ಲಾ ಕುಪ್ಮಾ ಸಮಿತಿ ಕಾರ್ಯದರ್ಶಿ ಡಾ.ಮಂಜುನಾಥ್ ಎಸ್.ರೇವಣಕರ್ ಸ್ವಾಗತಿಸಿದರು. ಜಿಲ್ಲಾ ಸಮಿತಿ ಅಧ್ಯಕ್ಷ ಯುವರಾಜ್ ಜೈನ್ ವಂದಿಸಿದರು. ಡಾ.ದಿವಾ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.