ಮಾದಕವಸ್ತು ಸೇವನೆ ಮೂವರು ಬಂಧನ

ಮಾದಕವಸ್ತು ಸೇವನೆ ಮೂವರು ಬಂಧನ
Published on: 

ಮಂಗಳೂರು: ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ಮೂವರನ್ನು ಬಜಪೆ ಮತ್ತು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಂದಾವರ ಗ್ರಾಮದ ಕೈಕಂಬ ಜಂಕ್ಷನ್ ಬಳಿ ಮಾದಕ ವಸ್ತು ಸೇವಿಸಿದ ನಶೆಯಲ್ಲಿದ್ದ ಬೆಂಜನಪದವಿನ ರಕ್ಷಿತ್ (23) ಮತ್ತು ಅಕ್ಷಯ್ ಬಿ. (23) ಎಂಬವರನ್ನು ಬಜಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಾದಕ ವಸ್ತು ಸೇವನೆ ದೃಢಪಟ್ಟಿದೆ.

ಇನ್ನೊಂದು ಪ್ರಕರಣದಲ್ಲಿ ನಗರದ ಬಾವುಟಗುಡ್ಡ ಬಳಿ ಮಾದಕ ವಸ್ತು ಸೇವಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮಂಗಳಾದೇವಿಯ ಸರ್ಫ್ರಾಜ್ ಅಲಿಯಾಸ್ ಇಬ್ರಾಹಿಂ ಸರ್ಫ್ರಾಜ್ (43) ಎಂಬಾತನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net