ಮಾ.27ರಂದು ನಸುಕಿನ ವೇಳೆ ಆರಿಫ್ ಮಂಗಳೂರು ಬಂದರಿನಲ್ಲಿರುವ ದಕ್ಕೆಗೆ ತನ್ನ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಇನ್ನೊವಾ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಮೇಲ್ಸೇತುವೆ ಮೇಲೆ ಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆಸಿ ಬಳಿಕ ತಲವಾರಿನಿಂದ ಕಡಿದು ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲೇ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಪ್ರಸ್ತುತ ಮೂವರ ಬಂಧನದೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 10ಕ್ಕೇರಿದೆ. ಪ್ರಕರಣ ತನಿಖೆ ಮುಂದುವರಿದಿದ್ದು, ಇನ್ನೂ ಕೆಲವರು ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಅವರನ್ನೂ ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರಡ್ಡಿ ತಿಳಿಸಿದ್ದಾರೆ.