

ಹಿಂದೆ ಶಾಲೆಯಲ್ಲಿ ವಿದ್ಯಾರ್ಥಿಗಳು ತುಳು ಭಾಷೆಯಲ್ಲಿ ಮಾತನಾಡುವಾಗ ಶಿಕ್ಷಕರು ಮಕ್ಕಳನ್ನು ಗದರುತ್ತಿದ್ದರು. ಆದರೆ ಇಂದು ಶಾಲೆಗಳಲ್ಲೂ ತುಳುವಿಗೆ ಪ್ರಾಧಾನ್ಯತೆ ಲಭಿಸುವಂತಾಗಿದೆ. ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 847 ವಿದ್ಯಾರ್ಥಿಗಳು ತೃತೀಯ ಭಾಷೆಯಾಗಿ ತುಳು ಭಾಷೆ ಆಯ್ಕೆ ಮಾಡಿ ಪರೀಕ್ಷೆ ಬರೆದಿದ್ದು, 847 ವಿದ್ಯಾರ್ಥಿಗಳು ಸಹ ಉತ್ತೀರ್ಣರಾಗಿದ್ದು, 317 ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ.