ಆರೋಪಿಗಳು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಲಭ್ಯವಾದ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೂಲಂಕುಷವಾಗಿ ವಿಚಾರಿಸಿದಾಗ ಕೇರಳದ ಮಂಜೇಶ್ವರ ಮೂಲದ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ಎಂಡಿಎಂಎ ಪಡೆದು ಪ್ಲಾಸ್ಟಿಕ್ ಕವರ್ ನಲ್ಲಿ ತುಂಬಿಸಿ ಹೆಚ್ಚಿನ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡಲು ಬಂದಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳ ಸ್ಕೂಟರ್ ನಲ್ಲಿ ಮೂರು ಕವರ್ ನಲ್ಲಿ ಒಟ್ಟು 12.46 ಗ್ರಾಂ ತೂಕದ, 1,24,600 ರೂ. ಅಂದಾಜು ಮೌಲ್ಯದ ಎಂಡಿಎಂಎ ಪತ್ತೆಯಾಗಿದೆ. ಆರೋಪಿಗಳ ಬಳಿಯಿಂದ 5 ಸಾವಿರ ರೂ. ಮೌಲ್ಯದ ಮೊಬೈಲ್, ಎರಡು ಸ್ಕೂಟರ್ ಸೇರಿ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್ ಡಿಪಿ ಎಸ್ ಕಾಯ್ದೆಯಡಿ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.