1 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

 ಗಾಂಜಾ
ಗಾಂಜಾ
Published on
ಮಂಗಳೂರು: ಬಿಹಾರ ರಾಜ್ಯದಿಂದ ರೈಲಿನ ಮೂಲಕ ಮಂಗಳೂರಿಗೆ ಮಾದಕ ವಸ್ತು ಗಾಂಜಾ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೆಹದ್ದಿಪುರ್ ನಿವಾಸಿ ಸುನಿಲ್ ಕುಮಾರ್ (40), ಉತ್ತರ ಪ್ರದೇಶ ಚುನಾರ್ ಮಿರ್ಜಾಪುರ್ ನಿವಾಸಿ ಬ್ರಿಜೇಶ್ ಶ್ರೀವಾಸ್ತವ (42) ಬಂಧಿತರು. ಪ್ರಸ್ತುತ ಆರೋಪಿಗಳು ಕಾಟಿಪಳ್ಳ ಕೃಷ್ಣಾಪುರದಲ್ಲಿ ನೆಲೆಸಿದ್ದರು.
ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ಆರೋಪಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 1 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ವಿಚಾರಣೆ ನಡೆಸಿದಾಗ, ಗಾಂಜಾವನ್ನು ಬಿಹಾರದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಬಜ್ಪೆ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net