ಕಾರು-ಲಾರಿ ಡಿಕ್ಕಿಯಾಗಿ ಇಬ್ಬರು ಗಂಭೀರ

ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಅಪಘಾತಕ್ಕೀಡಾದ ಕಾರು.
ಅಪಘಾತಕ್ಕೀಡಾದ ಕಾರು.
Published on: 

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಗಾಯಾಳುಗಳನ್ನು ಕಾರಿನಲ್ಲಿದ್ದ ಅನೂಪ್ ಕುಮಾರ್ (44), ಅವರ ಅತ್ತೆ ರೇಖಾ ಎಂದು ಗುರುತಿಸಲಾಗಿದೆ. ಅವರಿಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ಮೂಡುಬಿದಿರೆಯ ಪುತ್ತಿಗೆ ನಿವಾಸಿಗರಾಗಿದ್ದು ಬೆಂಗಳೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net