ಜಾತ್ರೋತ್ಸವ ಸಂತೆ ಏಲಂನಲ್ಲಿ ಪಾರದರ್ಶಕತೆ VITTAL

ವಿಟ್ಲ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ
ಕರುಣಾಕರ ನಾಯ್ತೊಟ್ಟು ಅಧ್ಯಕ್ಷತೆಯಲ್ಲಿ ವಿಟ್ಲ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ನಡೆಯಿತು. ಸಂಗೀತಾ ಪಾಣೆಮಜಲು, ಅಶೋಕ್ ಕುಮಾರ್ ಶೆಟ್ಟಿ, ಕರುಣಾಕರ ವಿ. ಇದ್ದರು.
ಕರುಣಾಕರ ನಾಯ್ತೊಟ್ಟು ಅಧ್ಯಕ್ಷತೆಯಲ್ಲಿ ವಿಟ್ಲ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ನಡೆಯಿತು. ಸಂಗೀತಾ ಪಾಣೆಮಜಲು, ಅಶೋಕ್ ಕುಮಾರ್ ಶೆಟ್ಟಿ, ಕರುಣಾಕರ ವಿ. ಇದ್ದರು.
Published on: 

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಂತೆಯಲ್ಲಿ ತಾತ್ಕಾಲಿಕ ವ್ಯಾಪಾರ ಮಳಿಗೆಗಳಿಗೆ ತೆರೆದ ಮತ್ತು ತೆರೆಯದ ಲಕೋಟೆಯಲ್ಲಿ ಏಲಂ ಪ್ರಕ್ರಿಯೆ ನಡೆಸಲು ವಿಟ್ಲ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ಸದಸ್ಯ ಅರುಣ್ ಎಂ.ವಿಟ್ಲ ಮಾತನಾಡಿ, ಸಂತೆ ಏಲಂ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ವಿರುದ್ಧ ಯಾವುದೇ ಅಪಸ್ವರ ಬರದಂತೆ ಎಚ್ಚರ ವಹಿಸಬೇಕಾಗಿದೆ. ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಲು ಗುತ್ತಿಗೆದಾರರಿಗೆ ಸೂಚನೆ ನೀಡಬೇಕು. ಸಂತೆಯಲ್ಲಿ ತಾತ್ಕಾಲಿಕ ವ್ಯಾಪಾರ ಮಳಿಗೆಗಳಿಗೆ ಏಲಂ ಕುರಿತು ಸಮರ್ಪಕ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರ.

ಕರ್ನಾಟಕ ಒಳಚರಂಡಿ ಮತ್ತು ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಶೋಭಾಲಕ್ಷ್ಮೀ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯ ಮಾಹಿತಿ ನೀಡಿದರು.

ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಸ್ಥಾಯಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ರವಿಪ್ರಕಾಶ್, ಹರೀಶ್, ಜಯಂತ್, ವಿಜಯಲಕ್ಷ್ಮೀ, ಸುನೀತಾ, ಗೋಪಿಕೃಷ್ಣ, ರಕ್ಷಿತಾ, ಅಬ್ದುಲ್ ರಹಿಮಾನ್, ವಿ.ಕೆ.ಎಂ.ಅಶ್ರಫ್ ಸದಸ್ಯರಾಗಿ ಆಯ್ಕೆಯಾದರು.

ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರುಣಾಕರ ವಿ., ಹಿರಿಯ ಇಂಜಿನಿಯರ್ ಮನೋಜ್ ಕುಮಾರ್, ಕಂದಾಯ ವಸೂಲಿಗಾರ ಚಂದ್ರಶೇಖರ ವರ್ಮ, ಆರೋಗ್ಯ ನಿರೀಕ್ಷಕ ರಾಮಚಂದ್ರ ಉಪಸ್ಥಿತರಿದ್ದರು.