ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷ ಎಚ್.ಜಗನ್ನಾಥ ಸಾಲಿಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣಮುರಳಿ ಶ್ಯಾಮ್ ಕೆ. ಅವರನ್ನು ಸನ್ಮಾನಿಸಿದರು.
ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಸಂಘಕ್ಕೆ ಸತತ ೫ನೇ ಬಾರಿಗೆ ಸಾಧನಾ ಪ್ರಶಸ್ತಿಯನ್ನು ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.
೨೦೨೫-೨೬ನೇ ಆರ್ಥಿಕ ಸಾಲಿನಲ್ಲಿ ಸಂಘವು ೧೦೮೮ ಕೋಟಿ ರೂ. ವ್ಯವಹಾರ, ೧೪೯.೮೪ ಕೋಟಿ ರೂ. ಠೇವಣಿ, ೧೨೫.೬೩ ಕೋಟಿ ರೂ. ಸಾಲ ಹಾಗೂ ೪.೦೪ ಕೋಟಿ ರೂ. ಲಾಭ ಗಳಸಿದ್ದು, ಈ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷ ಎಚ್.ಜಗನ್ನಾಥ ಸಾಲಿಯಾನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಽಕಾರಿ ಕೃಷ್ಣಮುರಳಿ ಶ್ಯಾಮ್ ಕೆ. ಅವರನ್ನು ಸನ್ಮಾನಿಸಿದರು.
ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್.ರಮೇಶ್, ವಿಟ್ಲ ಗ್ರಾಮೀಣ ಸಹಕಾರಿ ಸಂಘದ ನಿರ್ದೇಶಕರಾದ ವಿಶ್ವನಾಥ ಎಂ., ದಯಾನಂದ ಆಳ್ವ ಮತ್ತಿತರರು ಉಪಸ್ಥಿತರಿದ್ದರು.