ಹೊಸ ಕಲ್ಯಾಣ ಯೋಜನೆ ಜಾರಿ : ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಮಾಹಿತಿ

ಮಹಿಳಾ ಹೂಡಿಕೆದಾರರ ಸಮಾವೇಶ ಮತ್ತು ರಫ್ತು ಕಾರ್ಯಾಗಾರ ‘ಬಿ ಟು ಬಿ’ ಸಭೆಯನ್ನು ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಹೂಡಿಕೆದಾರರ ಸಮಾವೇಶ ಮತ್ತು ರಫ್ತು ಕಾರ್ಯಾಗಾರ ‘ಬಿ ಟು ಬಿ’ ಸಭೆಯನ್ನು ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಉದ್ಘಾಟಿಸಿ ಮಾತನಾಡಿದರು.
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಸರ್ಕಾರ ಘೋಷಿಸಿರುವ ವಿವಿಧ ಕಲ್ಯಾಣ ಯೋಜನೆಗಳು ನವೆಂಬರ್ 1ರಿಂದ ಜಾರಿಗೆ ಬರಲಿದ್ದು, ಈ ಕುರಿತು ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಕಾಞಂಗಾಡು ರಾಜ್ ರೆಸಿಡೆನ್ಸಿಯಲ್ಲಿ ಆಯೋಜಿಸಿದ್ದ ಮಹಿಳಾ ಹೂಡಿಕೆದಾರರ ಸಮಾವೇಶ ಮತ್ತು ರಫ್ತು ಕಾರ್ಯಾಗಾರ ‘ಬಿ ಟು ಬಿ’ ಸಭೆ ಉದ್ಘಾಟಿಸಿ ಮಾತನಾಡಿದರು.

ಐವತ್ತು ಕೋಟಿ ರೂ. ವೆಚ್ಚದ ಕನ್ವೆನ್ಶನ್ ಸೆಂಟರ್‌ಗಳಿಗೆ ಕಡಿಮೆ ಬಡ್ಡಿದರದ ಸಾಲ ನೀಡುವ ಯೋಜನೆಯಿದ್ದು, ಜತೆಗೆ ಮಹಿಳೆಯರಿಗೆ ಅವರ ಮನೆ ಬಳಿಯಲ್ಲಿ ‘ವರ್ಕ್ ನಿಯರ್ ಹೋಮ್’ ಯೋಜನೆಯನ್ವಯ ಕಿರು ಉದ್ದಿಮೆ ಪ್ರಾರಂಭಿಸಲು ಸಾಲ ನೀಡುವ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದರು.

ಶಾಸಕ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಧಾನ ವ್ಯವಸ್ಥಾಪಕ ಕೆ.ಸಜಿತ್ ಕುಮಾರ್ ವರದಿ ವಾಚಿಸಿದರು. ಶಾಸಕ ಎಂ.ರಾಜಗೋಪಾಲನ್, ಜಿಪಂ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಉಪಾಧ್ಯಕ್ಷ ಶಾನವಾಸ್ ಪಾದೂರು, ಲೋಕೋಪಯೋಗಿ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಶಕುಂತಳಾ, ಕಾಞಂಗಾಡು ನಗರಸಭೆ ಅಧ್ಯಕ್ಷೆ ಕೆ.ವಿ.ಸುಜಾತಾ, ಜಿಲ್ಲಾ ಯೋಜನಾ ಸಮಿತಿ ಸದಸ್ಯ ವಿ.ವಿ.ರಮೇಶ, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ವಿಶೇಷ ಅಧಿಕಾರಿ ವಿ.ಚಂದ್ರನ್, ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ಅಬ್ದುಲ್‌ಸಲಾಂ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net