ಮರದಿಂದ ಬಿದ್ದು ಕಾರ್ಮಿಕ ಸಾವು

ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
Death
Death
Published on: 

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಬಾಂಬಿಲದಲ್ಲಿ ತೋಟದ ತೆಂಗಿನ ಮರದಿಂದ ಬಿದ್ದು ಚಿಕಿತ್ಸೆಯಲ್ಲಿದ್ದ ಕೃಷಿಕೂಲಿ ಕಾರ್ಮಿಕ ರಮೇಶ (33) ಎಂಬುವರು ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ.

ಅವಿವಾಹಿತರಾಗಿದ್ದ ಅವರು, ತೆಕ್ಕಾರಿನ ಬಾಂಬಿಲದಲ್ಲಿ ಮಹಮ್ಮದ್ ಕುಂಞಿ ಎಂಬುವರ ತೋಟದಲ್ಲಿ ತೆಂಗಿನಕಾಯಿ ಕೀಳಲೆಂದು ಹೋದಾಗ ನ.23ರಂದು ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದರೆ ಎಂದು ಮೃತರ ಸಹೋದರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.