ಉತ್ತಮ ಆರೋಗ್ಯಕ್ಕೆ ಯೋಗ, ಧ್ಯಾನ ಪೂರಕ

ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ
ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಸುರೇಶ್ ಕುಮಾರ್ ಕೂಡೂರು ಉದ್ಘಾಟಿಸಿದರು. ಮನೋಹರ ಎ.,  ಇಂದುಶೇಖರ ಶೆಟ್ಟಿ, ಮಹೇಶ್ ಕೆ.ಸವಣೂರು ಮತ್ತಿತರರು ಇದ್ದರು.
ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಸುರೇಶ್ ಕುಮಾರ್ ಕೂಡೂರು ಉದ್ಘಾಟಿಸಿದರು. ಮನೋಹರ ಎ., ಇಂದುಶೇಖರ ಶೆಟ್ಟಿ, ಮಹೇಶ್ ಕೆ.ಸವಣೂರು ಮತ್ತಿತರರು ಇದ್ದರು.
Published on: 

ಕಡಬ: ಇಂದಿನ ದಿನಗಳಲ್ಲಿ ಯುವಜನತೆಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಅಗತ್ಯವಿದೆ. ಮಕ್ಕಳು ಆರೋಗ್ಯವಂತರಾಗಿರಲು ಪ್ರತಿನಿತ್ಯ ಯೋಗ, ಧ್ಯಾನ ಹಾಗೂ ಧಾರ್ಮಿಕ ಚಿಂತನೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಇದರಿಂದ ವ್ಯಕ್ತಿಗಳು ಆರೋಗ್ಯವಂತರಾಗುವುದಲ್ಲದೆ, ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯ ಎಂದು ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಸುರೇಶ್ ಕುಮಾರ್ ಕೂಡೂರು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು, ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಸಹಕಾರದೊಂದಿಗೆ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಕೀಲ ಮನೋಹರ ಎ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಸಂಸ್ಥೆಯ ಸಂಚಾಲಕ ಗಂಗಾಧರ ಗೌಡ ಕುಂಡಡ್ಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಕೆ.ಸವಣೂರು ಶುಭ ಹಾರೈಸಿದರು. ಅಖಿಲ ಕರ್ನಾಟಕ ಜನಜಾಗತಿ ವೇದಿಕೆಯ ವಲಯ ಸದಸ್ಯೆ ಮಮತಾ ಅಂಬರ್ಜೆ, ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮದ ಮುಖ್ಯಸ್ಥ ಸತೀಶ್ ಕುಮಾರ್ ಜಿ.ಆರ್., ಕನ್ನಡ ಮಾಧ್ಯಮದ ಪ್ರಭಾರ ಮುಖ್ಯಸ್ಥೆ ವೇದಾವತಿ ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಪ್ರೇಮಾ ಸ್ವಾಗತಿಸಿ, ಶಿಕ್ಷಕಿ ಸುಕನ್ಯಾ ವಂದಿಸಿದರು. ವಲಯ ಮೇಲ್ವಿಚಾರಕಿ ಲತಾ ಕಾರ್ಯಕ್ರಮ ನಿರೂಪಿಸಿದರು.