ನೇಣುಬಿಗಿದು ಯುವಕ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ನೂಜಿಬಾಳ್ತಿಲ ಗ್ರಾಮದ ಬದಿ ಬಾಗಿಲು ಸಮೀಪದ ನಿವಾಸಿ ಜುಬಿನ್ ತೋಮಸ್(24) ಆತ್ಮಹತ್ಯೆ ಮಾಡಿಕೊಂಡವರು. ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಮಂಗಳವಾರ ತನ್ನ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಹೋಟೆಲ್ ಮ್ಯಾನೇಜ್‌ಮೆಂಟ್ ಶಿಕ್ಷಣ ಪಡೆದು ಉದ್ಯೋಗದಲ್ಲಿದ್ದ ಜುಬಿನ್ ಕೆಲ ದಿನಗಳಲ್ಲೇ ವಿದೇಶದಲ್ಲಿ ಉದ್ಯೋಗಕ್ಕೆ ತೆರಳುವವರಿದ್ದರು. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿನ ಉದ್ಯೋಗಕ್ಕೂ ರಿಸೈನ್ ಮಾಡಿದ್ದು, ವಿದೇಶದ ಉದ್ಯೋಗಕ್ಕೆ ತೆರಳಲು ಸಿದ್ಧತೆಯಲ್ಲಿದ್ದರು ಎಂದು ತಿಳಿದು ಬಂದಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net