ಸಿಎಂ ಪರವಾಗಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

29 ckm 4
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಡಿಎಸ್‌ಎಸ್ ಕಾರ್ಯಕರ್ತರು ಮನುವಾದಿ ಮತ್ತು ಜಾತಿವಾದಿಗಳ ಜೊತೆಗೆ ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ಯಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದರು. ಬಾಲಕೃಷ್ಣ ಬಿಳೇಕಲ್ಲು, ಪ್ರಸನ್ನಕುಮಾರ್, ಬಾಬು, ಯೋಗೀಶ್, ಸಿದ್ದಯ್ಯ, ವಸಂತ್, ಗಿರೀಶ್, ಶೇಖರ್, ರಮೇಶ್, ಟಿ.ರವಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಮನುವಾದಿ ಮತ್ತು ಜಾತಿವಾದಿಗಳ ಜೊತೆಗೆ ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ಯಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಗುರುವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು, ರಾಜ್ಯದಲ್ಲಿ ಅಧಿಕಾರದ ಗದ್ದುಗೆಗೆ ಏರುವ ಆತುರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಹಿಂದಾ ನಾಯಕರ ವಿರುದ್ಧ ಸುಳ್ಳು ಆರೋಪ ಮಾಡಿ ರಾಜ್ಯಪಾಲರ ಮೂಲಕ ಪ್ಯಾಸಿಕ್ಯೂಷನ್‌ಗೆ ಅನುಮತಿ ಕೊಡಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಹಾಗೂ ಜೆಡಿಎಸ್ ಎರಡು ಪಕ್ಷಗಳು ರಾಜ್ಯದಲ್ಲಿ ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವನ್ನಿಟ್ಟುಕೊಂಡು ಹಳೇ ಚಾಳಿಯನ್ನು ಪುನರಾರಂಭಿಸಿವೆ. ಇದರಿಂದ ರಾಜ್ಯದ ಸಜ್ಜನ ಹಾಗೂ ದೀನ ದಲಿತರ, ಬಡವರ ನಾಯಕನ ವಿರುದ್ಧ ಸುಳ್ಳು ಅಪಾದನೆ ಮಾಡುತ್ತಿರುವುದು ಬಿಜೆಪಿ, ಜೆಡಿಎಸ್ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಲಾಢ್ಯ ಜಾತಿ, ಕೋಮು ಬೆಂಗಾವಲಿನಲ್ಲಿಟ್ಟುಕೊAಡು ಅಧಿಕಾರದ ಗದ್ದುಗೆಯನ್ನು ಏರಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಬಗ್ಗೆ ನಾವು ಇಟ್ಟುಕೊಂಡ ಭಯವು ನಿಜವಾಗುತ್ತಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಮುದಾಯಗಳ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿ ಎರಡು ಪಕ್ಷಗಳು ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಜನಪರ ಆಡಳಿತದ ಭರವಸೆ ನೀಡಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಿಜೆಪಿಯೇತರ ಜನರಿಂದ ಆಯ್ಕೆಗೊಂಡ ರಾಜ್ಯಸರ್ಕಾರದ ವಿರುದ್ಧ ಷಡ್ಯಂತ್ರ ರೂಪಿಸಿದೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಲು ಮನುವಾದಿ ಪಕ್ಷಗಳು ಕುತಂತ್ರ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಎಲ್ಲ ಕಾಲದಲೂ ದ್ವೇಷದ ರಾಜಕಾರಣ ಮಾಡುತ್ತಾ ಉಸಿರಾಡುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರು ಇದೀಗ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಸಂಪುಟ ಸಭೆಯಲ್ಲಿ ಸಿಎಂ ವಿರುದ್ಧ ತನಿಖೆ ನಡೆಸಲು ಎಚ್ಚರಿಕೆ ನೋಟಿಸ್ ನೀಡಿರುವುದು ಕಾನೂನು ಪ್ರಕಾರವಾಗಿಲ್ಲ. ಹೀಗಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯಪಾಲರು ಪ್ಯಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಜಗಜ್ಜಾಹೀರಾಗಿದ್ದು, ಇದನ್ನು ರಾಷ್ಟç ಪತಿಗಳು ಮನಗಂಡು ಸಿದ್ದರಾಮಯ್ಯ ಅವರಿಗೆ ನೀಡಿರುವ ನೋಟೀಸ್ ಹಿಂಪಡೆಯಲು ಸೂಚಿಸಬೇಕು. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಮುಂದುವರೆಯಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಡಿಎಸ್‌ಎಸ್ ತಾಲೂಕು ಸಂಘಟನಾ ಸಂಚಾಲಕ ಪ್ರಸನ್ನಕುಮಾರ್, ಖಜಾಂಚಿ ಬಾಬು, ಮುಖಂಡರಾದ ಯೋಗೀಶ್, ಸಿದ್ದಯ್ಯ, ವಸಂತ್, ಗಿರೀಶ್, ಶೇಖರ್, ರಮೇಶ್, ಟಿ.ರವಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net