

ವಿಜಯವಾಣಿ ಸುದ್ದಿಜಾಲ ಭದ್ರಾವತಿ
ಪ್ರೊ. ಬಿ. ಕೃಷ್ಣಪ್ಪ ಅವರು ರಾಜ್ಯದಲ್ಲಿ ದಲಿತ ಚಳವಳಿಗಳ ರೂವಾರಿ, ದಲಿತರ ಬಾಳಿನ ಆಶಾಕಿರಣವಾಗಿದ್ದರು. ಅವರು ರೂಪಿಸಿಕೊಟ್ಟಿರುವ ಹೋರಾಟದ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಹೇಳಿದರು.
ಭಾನುವಾರ ನ್ಯೂಟೌನ್ ಜೆಟಿಎಸ್ ಶಾಲೆ ಸಮೀಪದ ಲಯನ್ಸ್ ಕಣ್ಣಿನ ಆಸ್ಪತ್ರೆ ಸಭಾ ಭವನದಲ್ಲಿ ಕರ್ನಾಟಕ ದಲಿತ ನೌಕರರ ಒಕ್ಕೂಟದ ತಾಲೂಕು ಶಾಖೆಯಿಂದ ಹಮ್ಮಿಕೊಂಡಿದ್ದ ಪ್ರೊ. ಬಿ.ಕೃಷ್ಣಪ್ಪ ಅವರ ೮೬ನೇ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಅವರ ದಾರಿಯಲ್ಲಿ ಸಾಗಿ ಬಂದ ಕೃಷ್ಣಪ್ಪ ಅವರು ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ ೧೯೭೫ರಲ್ಲಿ ದಲಿತ ಸಂಘಟನೆ ಮೂಲಕ ಚಳವಳಿಗಳನ್ನು ಆರಂಭಿಸಿ ನ್ಯಾಯ ಒದಗಿಸಿಕೊಡುವಲ್ಲಿ ಯಶಸ್ವಿಯಾದರು. ಹಲವಾರು ಪ್ರಮುಖ ಹೋರಾಟಗಳಲ್ಲಿ ಕೃಷ್ಣಪ್ಪ ಅವರು ಮುಂಚೂಣಿ ನಾಯಾಕರಾಗಿದ್ದರು. ಅವರ ಹೋರಾಟ ನಮ್ಮೆಲ್ಲರಿಗೂ ಮಾದರಿಯಾಗಿದ್ದು ಅದೇ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು ಎಂದರು.
ಒಕ್ಕೂಟದ ಅಧ್ಯಕ್ಷೆ ಎಸ್.ಉಮಾ ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ಸಿ.ಜಯಪ್ಪ ಹೆಬ್ಬಳಗೆರೆ, ಶಿವಮೊಗ್ಗ ಇತಿಹಾಸ ತಜ್ಞ ಡಾ. ಕೆ.ಜಿ.ವೆಂಕಟೇಶ್ ಉಪನ್ಯಾಸ ನೀಡಿದರು.
ರಾಜ್ಯ ರೈತಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಬೆಂಗಳೂರು ಗಾಂಽಭವನ ಪ್ರೊ. ಬಿ.ಕೃಷ್ಣಪ್ಪ ಟ್ರಸ್ಟ್ ಕಾರ್ಯದರ್ಶಿ, ಮ್ಯಾನೇಜಿಂಗ್‌ಟ್ರಸ್ಟಿ ಇಂದಿರಾ ಕೃಷ್ಣಪ್ಪ, ಹಿರಿಯ ಸಾಹಿತಿ ಜಿ.ವಿ.ಸಂಗಮೇಶ್ವರ್, ನಿವೃತ್ತ ಉಪನ್ಯಾಸಕ ಪ್ರೊ. ಎಂ.ಚAದ್ರಶೇಖರಯ್ಯ, ನಗರಸಭೆ ಅಧ್ಯಕ್ಷೆ ಬಿ.ಪಿ.ಸರ್ವಮಂಗಳಾ ಭೈರಪ್ಪ, ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್, ಪೌರಾಯುಕ್ತ ಎಚ್.ಎಂ.ಮನುಕುಮಾರ್, ಕ್ಷೇತ್ರ ಶಿಕ್ಷಣಾಽಕಾರಿ ಎ.ಕೆ.ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್. ಗೋಪಾಲಪ್ಪ, ಒಕ್ಕೂಟದ ಪ್ರಭಾರ ಜಿ¯್ಲÁಧ್ಯಕ್ಷ ಸಿ.ಕೆ.ಗಂಗಾಧರಮೂರ್ತಿ, ಡಿಎಸ್‌ಎಸ್‌ಜಿ¯್ಲÁ ಸಂಚಾಲಕ ಚಿನ್ನಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಟಿ.ಪೃಥ್ವಿರಾಜ್, ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ. ವರ್ಷಾ, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ರಂಗನಾಥ್, ಒಕ್ಕೂಟದ ಉಪಾಧ್ಯಕ್ಷ ಲೋಕೇಶ್, ಗೌರವಾಧ್ಯಕ್ಷ ಎಂ.ಈಶ್ವರಪ್ಪ, ಮಾರ್ಗದರ್ಶಕ ಕೆ.ಬಿ. ಜುಂಜಾನಾಯ್ಕ್, ಸಂಘಟನಾ ಕಾರ್ಯದರ್ಶಿ ಕೆ.ರಂಗನಾಥ್, ವಿವಿಧ ಸಂಘಟನೆಗಳ ಪ್ರಮುಖರು, ದಲಿತ ನೌಕರರು ಇತರರಿದ್ದರು.