ರಾಜಸ್ತಾನದಲ್ಲಿ ಬಾಲಕನ ಹತ್ಯೆ: ಮಂಡ್ಯದಲ್ಲಿ ದಲಿತ ಹಕ್ಕುಗಳ ಸಮಿತಿಯಿಂದ ತಮಟೆ ಚಳವಳಿ

Protest
Published on

ಮಂಡ್ಯ: ರಾಜಸ್ತಾನದಲ್ಲಿ ಕುಡಿಯುವ ನೀರು ಮುಟ್ಟಿದ ಕಾರಣಕ್ಕೆ ದಲಿತ ಬಾಲಕನನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಘಟಕದಿಂದ ತಮಟೆ ಚಳವಳಿ ನಡೆಸಲಾಯಿತು.
ಸರ್‌ಎಂವಿ ಪ್ರತಿಮೆಯಿಂದ ತಮಟೆ ಬಾರಿಸುವ ಮೂಲಕ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಾಲಕನನ್ನು ಕೊಂದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದರು. ಈ ಘಟನೆ ಅಮೃತ ಮಹೋತ್ಸವವನ್ನು ನಾಚಿಸುವಂತೆ ಮಾಡಿದೆ. ಇಂತಹ ಅಮಾನವೀಯ ಘಟನೆ ಬಗ್ಗೆ ಪರಿಶೀಲನೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಇದಲ್ಲದೆ ಅಮೃತ ಮಹೋತ್ಸವದ ಅಂಗವಾಗಿ ಸನ್ನಡತೆಯ ಹೆಸರಿನಲ್ಲಿ ಗುಜರಾತ್‌ನ ಗೋದ್ರಾ ಜೈಲಿನಿಂದ 11 ಜನ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. ಇವರ‌್ಯಾರು ದೇಶ ಭಕ್ತರಲ್ಲ, ನ್ಯಾಯಕ್ಕಾಗಿ ಹೋರಾಟ ಮಾಡಿದವರಲ್ಲ. ಅತ್ಯಾಚಾರ ಮಾಡಿ ಕೊಲೆ ಮಾಡಿದವರು. ಇಂತಹವರನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಅಲ್ಲಿನ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ಮಣ್ಣು ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ ಉಳಿವಿಗಾಗಿ ಒಗ್ಗಟ್ಟಿನಿಂದ ಹೋರಾಟ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗೋಪಾಲಕೃಷ್ಣ ಹರಳಹಳ್ಳಿ, ಆರ್.ಕೃಷ್ಣ, ಅಂಬೂಜಿ, ಸಿ.ಕುಮಾರಿ, ಶಿವಲಿಂಗಯ್ಯ, ಬೋರಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net