ಮದ್ದೂರು: ತಾಲೂಕಿನ ಯರಗನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಶೀಘ್ರವಾಗಿ ನಿರ್ಮಾಣ ಮಾಡಬೇಕು ಹಾಗೂ ಗ್ರಾಮದ ಸ್ಮಶಾನ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ವತಿಯಿಂದ ಸೋಮವಾರ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತು.
ಸಮಿತಿಯ ಜಿಲ್ಲಾಧ್ಯಕ್ಷ ಆರ್.ಕೃಷ್ಣ ಮಾತನಾಡಿ, ತಾಲೂಕಿನ ಯರಗನಹಳ್ಳಿ ಗ್ರಾಮದಲ್ಲಿ 200ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ವಾಸ ಮಾಡುತ್ತಿದ್ದು, ಇವರಿಗೆ ಅವಶ್ಯಕವಾಗಿ ಬೇಕಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡುವಂತೆ ಹಾಗೂ ಸ್ಮಶಾನ ಅಭಿವೃದ್ಧಿ ಪಡಿಸುವಂತೆ ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದ ಸ್ಮಶಾನದ ಜಾಗವನ್ನು ನೆಪ ಮಾತ್ರಕ್ಕೆ ಮಂಜೂರಾಗಿದ್ದರೂ ಅಲ್ಲಿ ಶವ ಹೂಳಲು ಯಾವುದೇ ರೀತಿಯ ಮೂಲ ಸೌಲಭ್ಯಗಳು ಇಲ್ಲದೇ ಗಿಡಗಂಟಿಗಳು ಬೆಳೆದು ಶವ ಹೂಳಲು ಸಾಧ್ಯವಾಗದೆ ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಈ ಕೂಡಲೇ ಗ್ರಾಮದ ಸ್ಮಶಾನವನ್ನು ಅಭಿವೃದ್ಧಿಪಡಿಸಬೇಕು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭನವ ಭವನವನ್ನ ಶೀಘ್ರವಾಗಿ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ನಾಗರಾಜು ಮಾತನಾಡಿ, ಶೀಘ್ರವಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ.ಎಸ್.ಶಿವಲಿಂಗಯ್ಯ, ಜಯರಾಮಯ್ಯ, ವೈ.ಕೆ.ದ್ಯಾವಯ್ಯ, ಮಲ್ಲಿಕಾರ್ಜುನಸ್ವಾಮಿ, ನವೀನ್‌ಕುಮಾರ್, ಚಿಕ್ಕತಾಯಮ್ಮ, ಚಂದ್ರಮ್ಮ, ಶಾರದಮ್ಮ, ಮರಂಕಮ್ಮ, ನಿಂಗರಾಜು, ಹೊಂಬಾಳಯ್ಯ, ಕೃಷ್ಣಮೂರ್ತಿ, ಶಿವರಾಜು, ವೈ.ಕೆ. ಲಿಂಗಯ್ಯ ಇದ್ದರು.
ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಭವನ ಶೀಘ್ರವಾಗಿ ನಿರ್ಮಾಣ ಮಾಡಬೇಕು ಹಾಗೂ ಗ್ರಾಮದ ಸ್ಮಶಾನ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ವತಿಯಿಂದ ಸೋಮವಾರ ಮದ್ದೂರು ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಆರ್.ಕೃಷ್ಣ, ಕೆ.ಎಸ್.ಶಿವಲಿಂಗಯ್ಯ, ಜಯರಾಮಯ್ಯ, ವೈ.ಕೆ.ದ್ಯಾವಯ್ಯ, ಮಲ್ಲಿಕಾರ್ಜುನಸ್ವಾಮಿ, ನವೀನ್‌ಕುಮಾರ್, ಚಿಕ್ಕತಾಯಮ್ಮ, ಚಂದ್ರಮ್ಮ, ಇದ್ದರು.