ಸಿಎಂ ಸಿದ್ದರಾಮಯ್ಯರಿಂದ ಜನವಿರೋಧಿ ನಡವಳಿಕೆ: ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಖಂಡನೆ

Dalit Sangharsh Samiti Press Conference Mandya
Published on

ಮಂಡ್ಯ: ರಾಜ್ಯದಲ್ಲಿ ಜಾತಿಗಣತಿ ಮಾಡಿಸಿ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಸಾಮಾಜಿಕ ನ್ಯಾಯ ವಿರೋಧಿಸುವ ಜಾತಿವಾದಿ ಷಡ್ಯಂತ್ರಕ್ಕೆ ಮಣಿದು ಜನವಿರೋಧಿ ನಡವಳಿಕೆ ತೋರುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಖಂಡನೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಎರಡು ಬಾರಿ ಅಧಿಕಾರಕ್ಕೆ ಬಂದರೂ ಕೋಟ್ಯಂತರ ರೂ ಜನತೆಯ ಹಣ ವ್ಯಯಿಸಿ ಜಾತಿ ಗಣತಿ ಮಾಡಿಯೂ ಬಿಡುಗಡೆ ಮಾಡಿ ಮೀಸಲಾತಿ ಜಾರಿಗೊಳಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಣೆಗೇಡಿತನ ಪ್ರದರ್ಶಿಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಕೆಲವು ರಾಜಕೀಯ ಜಾತಿವಾದಿಗಳ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮೂರು ತಿಂಗಳಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ನಿರ್ದೇಶನ ನೀಡಿದ್ದು, ವಾಸ್ತವಿಕತೆಗೆ ವಿರುದ್ದವಾಗಿದೆ. ಹೈಕಮಾಂಡ್ ನಿರ್ದೇಶನ ಜಾರಿಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆ ಶೋಷಿತ, ಅಹಿಂದ ಸಮುದಾಯಕ್ಕೆ ಘೋರ ಅನ್ಯಾಯವೆಸಗಲಿದೆ. ಹೈಕಮಾಂಡ್ ಆದೇಶಕ್ಕೆ ಮಣಿದು, ಜಾತಿ ಗಣತಿ ಮರುಸಮೀಕ್ಷೆಗೆ ಮುಂದಾದ ರಾಜ್ಯ ಸಚಿವ ಸಂಪುಟದ ತೀರ್ಮಾನ ಪ್ರಜಾಪ್ರಭುತ್ವದ ಕಗ್ಗೊಲೆ ಹಾಗೂ ಜನವಿರೋಧಿ ನಡೆಯಾಗಿದೆ. ಅಲ್ಲದೇ ಅಹಿಂದ ಸಮುದಾಯಗಳಿಗೆ ಶೇ.75ರಷ್ಟು ಮೀಸಲಾತಿ ನೀತಿ ಜಾರಿಯನ್ನು ಮುಂದೂಡುವ ಮೂಲಕ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಮನುವಾದಿತನವು ಸಾಮಾಜಿಕ ನ್ಯಾಯ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಬಿ.ಆನಂದ್, ಮಹಿಳಾಧ್ಯಕ್ಷೆ ಸುಶ್ಮಿತಾ, ತಾಲೂಕು ಅಧ್ಯಕ್ಷರಾದ ಮುತ್ತುರಾಜ್, ಮಹದೇವು, ತಮ್ಮಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net