ನಾಲ್ವಡಿಗೆ ಹೋಲಿಸಿದ್ದು ಸಮಾಜದ್ರೋಹದ ಕೃತ್ಯ: ದಸಂಸ ರಾಜ್ಯಾಧ್ಯಕ್ಷ ವೆಂಕಟ ಗಿರಿಯಯ್ಯ ಆಕ್ರೋಶ

Dalit Sangharsh Samiti press conference Mandya
Published on

ಮಂಡ್ಯ: ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಹೋಲಿಸುವ ಹೇಳಿಕೆ ಅವಹೇಳನಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಯತೀಂದ್ರ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಸಿದ್ದರಾಮಯ್ಯರನ್ನು ಹೋಲಿಕೆ ಮಾಡುವಂತೆ ಮಾತನಾಡುವುದೇ ಅವಹೇಳನಕಾರಿ ಕೃತ್ಯ. ಸಾಮಾಜಿಕ ಪರಿವರ್ತನೆಯ ಹರಿಕಾರರಲ್ಲಿ ಅಗ್ರಗಣ್ಯ ಸ್ಥಾನದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಸಿದ್ದರಾಮಯ್ಯ ಅವರನ್ನು ಹೋಲಿಕೆ ಮಾಡಿರುವುದು ಸಮಾಜ ದ್ರೋಹದ ಕೃತ್ಯ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಸಿದ್ದರಾಮಯ್ಯರನ್ನು ಡಿ.ದೇವರಾಜ ಅರಸು ಅವರಿಗೂ ಹೋಲಿಕೆ ಮಾಡಿ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಲಾಗಿದೆ. ಇದೀಗ ಪರಿಶಿಷ್ಟ ಸಮುದಾಯಕ್ಕೂ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಅನುದಾನವನ್ನು ಇತರೆ ಯೋಜನೆಗಳಗೆ ಬಳಸಿ ಅನ್ಯಾಯ ವೆಸಗಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಿತಿಯ ಜಿಲ್ಲಾಧ್ಯಕ್ಷ ಆನಂದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಶ್ಮಿತಾ ಆನಂದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net