ವರದಿಯಲ್ಲಿನ ನ್ಯೂನ್ಯತೆ ಸರಿಪಡಿಸಲಿ: ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹ

Dalit Sangharsh Samiti press conference Mandya
Published on

ಮಂಡ್ಯ: ನ್ಯಾಯಮೂರ್ತಿ ನಾಗಮೋಹನ್‌ದಾಸ್ ವರದಿ ಅವೈಜ್ಞಾನಿಕವಾಗಿದೆ. ರಾಜ್ಯಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಶಿಫಾರಸಿನಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸುವ ಜತೆಗೆ ಶೀಘ್ರವಾಗಿ ಒಳ ಮೀಸಲಾತಿ ನೀತಿ ಜಾರಿಗೊಳಿಸಲು ಮುಂದಾಗಬೇಕು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.

ಒಳ ಮೀಸಲಾತಿ ಮಾಡಲು ವೈಜ್ಞಾನಿಕ ಮತ್ತು ನ್ಯಾಯಸಮ್ಮತ ವರದಿ ಪಡೆಯಲು ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜತೆಗೆ ಮುಂದಿನ ಚುನಾವಣೆ ಬರುವವರೆಗೂ ಕಾಲದೂಡುವ ಹುನ್ನಾರ ನಡೆಸುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

30 ವರ್ಷದಿಂದ ಸಮೀಕ್ಷೆಗೆ ಆಯೋಗ ರಚಿಸಿ ಅವರ ವರದಿಯನ್ನು ತಿರಸ್ಕರಿಸುವುದಕ್ಕೆ ಸೀಮಿತಗೊಂಡಿವೆ. ಅಂತೆಯೇ ಸಿದ್ದರಾಮಯ್ಯ ಸರ್ಕಾರ ಇದೀಗ ಆಯೋಗದ ಹಲವು ನ್ಯೂನ್ಯತೆಗಳಿಂದ ಕೂಡಿದ ವರದಿ ಪಡೆದಿದೆ. ಶೋಷಿತ ಜಾತಿಗಳನ್ನು ಒಟ್ಟುಗೂಡಿಸಿ ಮೀಸಲು ವರ್ಗೀಕರಣ ಮಾಡುವ ಬದಲಿಗೆ ಜಾತಿಗಳ ವಿಭಜನೆ ಮಾಡಿ ಒಡೆದು ಆಳುವ ಮನಸ್ಥಿತಿ ತೋರುತ್ತಿದೆ. ಒಂದು ವೇಳೆ ತಮ್ಮ ಬೇಡಿಕೆಗಳನ್ನು ಈಡೇರಿಸದೇ ಹೋದಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾಧ್ಯಕ್ಷೆ ಸುಶ್ಮಿತಾ ಆನಂದ್, ಮದ್ದೂರು ತಾಲೂಕು ಅಧ್ಯಕ್ಷ ಮುತ್ತರಾಜು, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಶರಾವತಿ ಅಶ್ವಥ್, ನಿಂಗಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net