ದಲಿತ ಯುವಕನ ಕೊಲೆಗಾರನಿಗೆ ಕಠಿಣ ಶಿಕ್ಷೆಯಾಗಲಿ

20-DVD-4
Published on

ದೇವದುರ್ಗ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳದಲ್ಲಿ ನಡೆದಿರುವ ದಲಿತ ವ್ಯಕ್ತಿಯ ಕೊಲೆ ಖಂಡಿಸಿ ಪಟ್ಟಣದ ಮಿನಿವಿಧಾನಸೌಧ ಮುಂದೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸಂಗಾಪುರ ಗ್ರಾಮದಲ್ಲಿ ಕ್ಷೌರ ಮಾಡಿಸಲು ಹೋಗಿದ್ದ ದಲಿತ ವ್ಯಕ್ತಿ ಯಮನೂರಪ್ಪನನ್ನು ಕೊಲೆ ಮಾಡಲಾಗಿದೆ. ಕ್ಷೌರ ಮಾಡಿ ಎಂದು ಕೇಳಿದ್ದಕ್ಕೆ ದಲಿತ ಎನ್ನುವ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ ಮಾಡಲಾಗಿದೆ. ಇದು ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯವಾಗಿದೆ. ಕೊಲೆಗಾರನಿಗೆ ಕಠಿಣ ಶಿಕ್ಷೆ ನೀಡಬೇಕು. ಕೊಲೆಯಾದ ಯಮನೂರಪ್ಪ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಜತೆಗೆ ಭದ್ರತೆ ಒದಗಿಸಬೇಕು. ಮುಂದೆ ಇಂಥ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net