ಪುತ್ತೂರು: ಪುಣ್ಚಪ್ಪಾಡಿ ಗ್ರಾಮದ ಮಾಂತೂರಿನ ಖಾಸಗಿ ಜಾಗದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಅವಾಚ್ಯವಾಗಿ ಬೈದು, ಹಲ್ಲೆ ಮಾಡಿ, ಜೀವ ಬೆದರಿಕೆ, ಜಾತಿ ನಿಂದನೆ ಮಾಡಿ, ಮಾನ ಭಂಗಕ್ಕೆ ಯತ್ನಿಸಿದ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರಿನಲ್ಲಿ ಹೇಳಿದ ವ್ಯಕ್ತಿಗಳನ್ನು ಬಂದಿಸುವ ಜತೆಗೆ ಕೃತ್ಯಕ್ಕೆ ಬಳಸಿದ ಕಾರನ್ನು ಮುಟ್ಟುಗೋಲು ಹಾಕಬೇಕು. ಇಲ್ಲದಿದ್ದಲ್ಲಿ ಮುಂದಿನ 15 ದಿನದಲ್ಲಿ ಪುತ್ತೂರು ಡಿವೈಎಸ್ ಪಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಆನಂದ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಹೇಳಿದರು.
ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ. ಕೆ. ಸೇಸಪ್ಪ ಬಿದ್ರಕಾಡು, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಅಚ್ಯುತ್ ಮಲ್ಕಜೆ, ಪುತ್ತೂರು ದಲಿಕ ಮುಖಂಡ ಅಭಿಷೇಕ್, ದೂರುದಾರೆ ಪುಷ್ಪ ಸಿ. ರದೀಶ್ ಉಪಸ್ಥಿತರಿದ್ದರು.