ದಲಿತರ ಮೇಲಿನ ದೌರ್ಜನ್ಯಕ್ಕೆ ಖಂಡನೆ

010203
Published on

ಬೆಳಗಾವಿ: ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು.

ಇತ್ತೀಚೆಗೆ ದಲಿತರ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚುತ್ತಿವೆ. ಇನ್ನಾದರೂ ಸರ್ಕಾರ ಎಚ್ಚೆತ್ತು ದಲಿತರಿಗೆ ರಕ್ಷಣೆ ನೀಡಬೇಕು. ದಲಿತರ ಮೇಲೆ ದೌರ್ಜನ್ಯವೆಸಗಿದ ಪ್ರಕರಣಗಳ ಕುರಿತು ಗಮನ ಹರಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು. ಕಲ್ಲಪ್ಪ ಕಾಂಬಳೆ, ಆನಂದ ಅರಬಳ್ಳಿ, ದುರ್ಗಪ್ಪ ಮೇಲಿನಮನಿ, ರವಿ ಸಣ್ಣಕ್ಕಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net