ದಲಿತರ ಭೂಮಿ ವಸತಿಗೆ ಹಕ್ಕೊತ್ತಾಯ

hbr (4)
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಹೆಬ್ರಿ ತಾಲೂಕು ಆಡಳಿತ ಕಚೇರಿ ಮುಂಭಾಗ ದಲಿತರ ಭೂಮಿ ವಸತಿ ಹಕ್ಕು ಇತರೆ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಕ್ಕೊತ್ತಾಯ, ಪ್ರತಿಭಟನೆ ಶುಕ್ರವಾರ ನಡೆಯಿತು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರ್ ಮಾತನಾಡಿ, ಅನೇಕ ದಲಿತರು ನಿರಾಶ್ರಿತರಾಗಿದ್ದಾರೆ. ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಭೂಮಿ ಹಾಗೂ ವಸತಿ ಅವಶ್ಯಕವಾಗಿ ಬೇಕಾಗಿದೆ. ನಮ್ಮವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಸರ್ಕಾರಿ ಭೂಮಿ ಗುರುತಿಸಿ ಹಂಚಿಕೆ ಮಾಡಬೇಕು. ಸರ್ಕಾರ ನಮ್ಮ ಮನವಿಯನ್ನು ಆಲಿಸಿ, ಸೂಕ್ತ ವ್ಯವಸ್ಥೆ ಮಾಡಿಕೊಡಿ ಎಂದರು.

ಪ್ರತಿಭಟನೆಯ ನಂತರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಅಣ್ಣಪ್ಪ ನಕ್ರೆ, ರಾಘವ, ಅಣ್ಣಪ್ಪ, ರಾಮ, ಕೆ.ದೇವು, ದಲಿತ ಮುಖಂಡರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net