ಹಕ್ಕುಗಳಿಗಾಗಿ ಇಂದಿಗೂ ಹೋರಾಡುತ್ತಿರುವ ದಲಿತರು

DSS Strike
ತಾಲೂಕು ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಯಿತು.
Published on

ಬೈಂದೂರು: ದೇಶಕ್ಕೆ ಸ್ವಾತಂತ್ರೃ ದೊರೆತು 75 ವರ್ಷವಾದರೂ, ದಲಿತರು ತಮ್ಮ ಹಕ್ಕುಗಳಿಗಾಗಿ ಆಡಳಿತ ವ್ಯವಸ್ಥೆಯ ವಿರುದ್ಧ ಸಂಘರ್ಷ ನಡೆಸುತ್ತಲೇ ಇರುವುದು ವಿಷಾದನೀಯ. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ನ್ಯಾಯ ನೀಡಿಲ್ಲ ಎಂದು ಖಂಬದಕೋಣೆ ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಸುಬ್ರಹ್ಮಣ್ಯ ಭಟ್ ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಮಿತಿ ನೇತೃತ್ವದಲ್ಲಿ ಬೈಂದೂರು ತಾಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತರ ಭೂಮಿ-ವಸತಿ ಹಕ್ಕುಗಳಿಗಾಗಿ ಆಗ್ರಹಿಸಿ ತಾಲೂಕು ಆಡಳಿತ ಸೌಧದ ಎದುರು ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

ದಲಿತ ಸಂಘರ್ಷ ಸಮಿತಿಯ ಉಡುಪಿ ಜಿಲ್ಲಾ ಸಮಿತಿ ಸಂಚಾಲಕ ಮಂಜುನಾಥ ನಾಗೂರು, ಬೈಂದೂರು ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ಶಿವರಾಜ್ ಬೈಂದೂರು, ಪ್ರಮುಖರಾದ ಸತೀಶ ಯಡ್ತರೆ, ಭಾಸ್ಕರ ಕೆರ್ಗಾಲ್, ರಮೇಶ ಮರವಂತೆ, ಗೀತಾ ಸುರೇಶ, ಸಂಚಾಲಕಿ ಸುಶೀಲಾ ನಾಡ, ಮಾಧವ ಬಾಕಡ, ನಾಗರಾಜ ಉಪ್ಪುಂದ ಮೊದಲಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net