ಕಬಿನಿ- ನುಗು ಡ್ಯಾಂಗೆ ಬಿಗಿ ಭದ್ರತೆ

kabini dam
Published on

 ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ನಿಯೋಜನೆ

  ಎಚ್.ಡಿ. ಕೋಟೆ : ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ತಾಲೂಕಿನ ಪ್ರಮುಖ ಜಲಾಶಯಗಳಾದ ಕಬಿನಿ ಅಣೆಕಟ್ಟು ಹಾಗೂ ಸರಗೂರು ಸಮೀಪದ ನುಗು ಡ್ಯಾಂಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಕಬಿನಿ ಹಾಗೂ ನುಗು ಜಲಾಶಯಕ್ಕೆ ಈಗಾಗಲೇ ಕೈಗಾರಿಕಾ ಭದ್ರತಾ ಪಡೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸಾಕಷ್ಟು ಸಿಬ್ಬಂದಿ ಸ್ಥಳದಲ್ಲಿ ಕರ್ತವ್ಯ ನಿರತರಾಗಿದ್ದಾರೆ. ಭದ್ರತಾ ದೃಷ್ಟಿಯಿಂದ ಸಾರ್ವಜನಿಕರಿಗೆ ಜಲಾಶಯ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ವಿಜಯವಾಣಿಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net