

ಹೊನ್ನಾವರ: ತಾಲೂಕಿನ ಕರ್ಕಿಯ ದೈವಜ್ಞ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ರಾತ್ರಿ ಸುರಿದ ಗಾಳಿ ಮಳೆಯಿಂದ ವಿದ್ಯುತ್ ಲೈನ್ ಮೇಲೆ ಮರ ಬಿದ್ದು ಐದು ವಿದ್ಯುತ್ ಕಂಬಗಳು ತುಂಡಾಗಿವೆ.
ವಿದ್ಯುತ್ ಕಂಬಗಳು ತುಂಡಾದ ಪರಿಣಾಮ ಹಳದೀಪುರ, ಕರ್ಕಿಯ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜೋರಾದ ಗಾಳಿ ಮಳೆಗೆ ಕೆಲವೆಡೆ ಮರಗಳು ಮುರಿದು ಬಿದ್ದಿವೆ. ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ನೀಡಲು ಕ್ರಮ ಕೈಗೊಂಡಿದ್ದಾರೆ.