ಇಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿ

TC
ನವಲಗುಂದ ತಾಲೂಕಿನ ಶಲವಡಿ ಗ್ರಾಮದಲ್ಲಿ ಟಿ.ಸಿ ಸಮಸ್ಯೆಯಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುಂತಾಗಿದೆ.
Published on

ನವಲಗುಂದ: ತಾಲೂಕಿನ ಶಲವಡಿ ಗ್ರಾಮದ ಮೈಲಾರಪ್ಪ ಪ್ಲಾಟಿನಲ್ಲಿ ವಿದ್ಯುತ್ ಸರಬರಾಜಿಗೆ ಅಳವಡಿಸಿರುವ ಟಿ.ಸಿ. ಸಮಸ್ಯೆಯಿಂದ ಮನೆಗಳಲ್ಲಿನ ಇಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಕರಕಲಾಗುತ್ತಿವೆ.

ಮೂರು ತಿಂಗಳಿಂದ ಇಲ್ಲಿನ ಈ ಸಮಸ್ಯೆ ಪದೇಪದೆ ಕಾಣಿಸಿಕೊಳ್ಳುತ್ತಿದೆ. ಈ ಕುರಿತು ದೂರವಾಣಿ ಹಾಗೂ ಲಿಖಿತವಾಗಿ ದೂರು ನೀಡಿದರೂ ಹೆಸ್ಕಾಂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

‘ಗ್ರಾಮದ ಹಲವಾರು ಬಡಾವಣೆಗಳಲ್ಲಿ ಇಂತಹ ಸಮಸ್ಯೆಯಿದೆ. ಹೆಸ್ಕಾಂ ಅಧಿಕಾರಿಗಳು ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ. ತಕ್ಷಣ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಶಲವಡಿ ಗ್ರಾಮಸ್ಥ ದೇವೆಂದ್ರಪ್ಪ ಗೊಳಿಹಟ್ಟಿ ಹೇಳಿದ್ದಾರೆ.

ಶಲವಡಿ ಗ್ರಾಮದ ಸಮಸ್ಯೆ ಕುರಿತು ಯಾವುದೇ ದೂರು ಬಂದಿಲ್ಲ. ಈ ಕುರಿತು ಮಾಹಿತಿ ಕಲೆ ಹಾಕಿ ಸೂಕ್ತ ಕ್ರಮ ವಹಿಸುತ್ತೇವೆ.ಪ್ರೀತಿ ಕೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಸ್ಕಾಂ ನವಲಗುಂದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net