ಸಾರ್ವಜನಿಕ ಆಸ್ತಿಗೆ ಹಾನಿ, ಎಫ್​ಐಆರ್ ದಾಖಲು

public place
Published on

ಬೆಂಗಳೂರು: ರಾಜರಾಜೇಶ್ವರಿನಗರ ವಲಯದ ಕೆಂಚೇನಹಲ್ಲಿಯ ಐಡಿಯಲ್ ಹೋಮ್ಸ್ ಪೆಟ್ರೋಲ್ ಬ್ಯಾಂಕ್ ಬಳಿ ಖಾಸಗಿ ಕಟ್ಟಡ ನಿರ್ಮಾಣದ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಸ್ವತ್ತಿನ ಮಾಲೀಕನ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಮಂಜೇಗೌಡ ಎಂಬುವವರು ಕಟ್ಟಡ ನಿರ್ಮಿಸಲು ನಕ್ಷೆ ಮಂಜೂರಾತಿ ಪಡೆಯದೆ ಸುಮಾರು 6-8 ಅಡಿ ಆಳ ತಳಪಾಯದ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದರು. ಈ ವೇಳೆ ಸುಮಾರು 70 ಅಡಿ ಉದ್ದದಷ್ಟು ಪಾದಚಾರಿ ರಸ್ತೆ ಹಾಗೂ ಒಳಚರಂಡಿಯು ಕುಸಿದು ಬಿದ್ದು, ನಾಗರಿಕರು ಓಡಾಡಲು ತೊಂದರೆ ಉಂಟಾಗಿದೆ. ಜತೆಗೆ ಅಲ್ಲಿರುವ ಬಿಎಂಟಿಸಿ ಬಸ್ ತಂಗುದಾಣವೂ ಕೂಡ ಕುಸಿಯುವ ಸಂಭವ ಇದೆ. ಇದರಿಂದ ಪಾಲಿಕೆಗೆ ಅಂದಾಜು 20 ಲಕ್ಷ ರೂ.ನಷ್ಟ ಉಂಟಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮುಂಜಾಗೃತ ಕ್ರಮ ಅನುಸರಿಸದೆ ಕಾಮಗಾರಿ ಮಾಡುತ್ತಿರುವುದರಿಂದ ಅಕ್ಕ-ಪಕ್ಕದ ಮನೆಗಳಿಗೂ ಸಹ ಹಾನಿಯಾಗುವ ಸಾಧ್ಯತೆ ಇರುವುದರಿಂದ ಸದರಿ ಕಟ್ಟಡ ಮಾಲೀಕರ ಮೇಲೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net