

ಬೆಳ್ತಂಗಡಿ: ಸರ್ಕಾರಿ ಶಾಲೆಯ ಮಕ್ಕಳು ಶ್ರಮಿಸಿ, ಬೆಳೆಸಿದ ಹೂ ಗಿಡಗಳ ಕುಂಡಗಳನ್ನು ಪುಡಿ ಮಾಡಿರುವ ಘಟನೆ ತೆಂಕಕಾರಂದೂರು ಗ್ರಾಮದ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಪೆರೊಡಿತ್ತಾಯಕಟ್ಟೆಯಲ್ಲಿ ನಡೆದಿದೆ.
ಶುಕ್ರವಾರ ಸರ್ಕಾರಿ ರಜೆ ಇದ್ದ ಕಾರಣ, ಶನಿವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಮಕ್ಕಳು ತರಕಾರಿ ಗಿಡ, ಹಣ್ಣಿನ ಗಿಡಗಳನ್ನು ಕೂಡ ಬೆಳೆಸಿದ್ದಾರೆ. ಅದರ ಮೇಲೂ ಕಿಡಿಗೇಡಿಗಳ ಕಣ್ಣು ಬೀಳುವ ಸಾಧ್ಯತೆ ಇದೆ ಎಂದು ಶಿಕ್ಷಕರು ಭೀತಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.