

ಬ್ಯಾಕೋಡು: ಸಮೀಪ ಕಟ್ಟಿನಕಾರಿನಲ್ಲಿ ಇತ್ತೀಚೆಗೆ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಕಿಡಿಗೇಡಿಗಳು ಧ್ವಂಸಗೊಳಿಸಲು ಯತ್ನಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಹರಿದು ಹಾಕಿದ್ದಾರೆ. ಕೃತ್ಯ ಶನಿವಾರ ರಾತ್ರಿ ನಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿಂದೆ ಬಸ್ ನಿಲ್ದಾಣ ನಿರ್ಮಾಣ ಮಾಡುವ ವಿಚಾರದಲ್ಲಿ ಪರಸ್ಪರ ಚರ್ಚೆಗಳಾಗಿದ್ದು ಘಟನೆಗೆ ರಾಜಕೀಯ ವೈಷಮ್ಯವಿರಬಹುದು ಎಂದು ಗ್ರಾಪಂ ನೂತನ ಅಧ್ಯಕ್ಷ ಯೋಗರಾಜ ಯಮಗಳಲೆ ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಮೌಖಿಕ ದೂರಿನ ಆಧಾರದ ಮೇಲೆ ಕಾರ್ಗಲ್ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.