ಹಾನಿಗೊಳಗಾದ ಮನೆ ಪರಿಶೀಲನೆ

ಹಾನಿಗೊಳಗಾದ ಮನೆ ಪರಿಶೀಲನೆ
Published on

ಆಲೂರು: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನ ಯಗಚಿ ನದಿ, ವಾಟೆಹೊಳೆ ಕಾಲುವೆ, ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿರುವುದರಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಆಲೂರು ತಾಲೂಕಿನ ವಿವಿಧ ಭಾಗದಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಗ್ರಾಮೀಣ ಭಾಗದ ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ.
ತಾಲೂಕು ಆಡಳಿತದ ಮಾಹಿತಿಯನ್ವಯ 25ಕ್ಕೂ ಹೆಚ್ಚಿನ ಮನೆಗಳಿಗೆ ಹಾನಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಶುಂಠಿ ಬೆಳೆಗೆ ಕೊಳೆರೋಗ ತಗಲುವ ಆತಂಕದಲ್ಲಿ ರೈತರಿದ್ದಾರೆ. ತೆಂಗು-ಅಡಕೆ ಸೇರಿದಂತೆ ವಿವಿಧ ಬೆಳೆಗಳಿಗೂ ಹಾನಿಯುಂಟಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮಳೆಯಿಂದ ಹಾನಿಗೊಳಗಾಗಿರುವ ಮನೆಗಳಿಗೆ ತಹಸೀಲ್ದಾರ್ ನಂದಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net