

ದಾಂಡೇಲಿ: ಇಲ್ಲಿಯ ನಗರಸಭೆಗೆ ಅಧ್ಯಕ್ಷರಾಗಿ ಕಾಂಗ್ರೆಸ್ನ ಹಿರಿಯ ಸದಸ್ಯ ಅಶ್ಪಾಕ್ ಶೇಖ ಹಾಗೂ ಉಪಾಧ್ಯಕ್ಷೆಯಾಗಿ ಶಿಲ್ಪಾ ಕೋಡೇ ಆಯ್ಕೆಯಾಗಿದ್ದಾರೆ.
ಶನಿವಾರ ನಗರಸಭೆಯಲ್ಲಿ ಕಾರವಾರದ ಸಹಾಯಕ ಕಮಿಷನರ್ ಹಾಗೂ ಚುನಾವಣಾ ಅಧಿಕಾರಿ ಕನಿಷ್ಕ ಶರ್ಮಾ ಅವರ ಉಪಸ್ಥಿತಿಯಲ್ಲಿ ಆಯೋಜಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ತಲಾ 21 ಮತ ಪsಡೆದರೆ, ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ರೋಶನಜಿತ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶೋಭಾ ಜಾಧವ ತಲಾ 11 ಮತ ಪಡೆದು ಪರಾಭವಗೊಂಡಿದ್ದಾರೆ.
ಶಾಸಕ ಆರ್.ವಿ. ದೇಶಪಾಂಡೆ, ತಹಸೀಲ್ದಾರ್ ಶೈಲೇಶ ಪರಮಾನಂದ, ಪೌರಾಯುಕ್ತ ರಾಜಾರಾಮ ಪವಾರ ಇದ್ದರು.