ಪರಿಸರ ಸಂರಕ್ಷಿಸದಿದ್ದರೆ ಅಪಾಯ

12 mlv 1
?????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಮಳವಳ್ಳಿ:ಪರಿಸರ ನಾಶದಿಂದ ಮನುಕುಲಕ್ಕೆ ಅಪಾಯದ ಸೂಚನೆಗಳು ಪ್ರಕೃತಿಯಲ್ಲಿ ಜರುಗುತ್ತಿವೆ. ಈ ಹಿನ್ನೆಲೆಯಲ್ಲಿ ಇನ್ನಾದರೂ ಮರಗಿಡಗಳ ರಕ್ಷಣೆ ಮಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಅಪಾಯವನ್ನು ಜನರು ಎದುರಿಸಬೇಕಾಗುತ್ತದೆ ಎಂದು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹೇಂದ್ರ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪೊಲೀಸ್ ಹಾಗೂ ಶಾಲಾ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪರಿಸರ ದಿನಾಚರಣೆ ಕೇವಲ ಒಂದು ಕಾರ್ಯಕ್ರವಾಗಬಾರದು. ಇದೊಂದು ಎಚ್ಚರಿಕೆಯ ಗಂಟೆಯಾಗಿದ್ದು, ಜನ ಸಾಮಾನ್ಯರು ಗಂಭೀರವಾಗಿ ಪರಿಸರ ಉಳಿವಿನ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದರು. ಈಗಾಗಲೇ ಕೋವಿಡ್ ಸಂದರ್ಭದಲ್ಲಿ ಪ್ರಾಣವಾಯುವಿನ ಸಮಸ್ಯೆಯಿಂದ ಎಷ್ಟೆಲ್ಲಾ ಜೀವಗಳನ್ನು ಕಳೆದುಕೊಳ್ಳುವಂತಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಇದಕ್ಕೆಲ್ಲ ಮೂಲ ಪ್ರಕೃತಿ ನಾಶದಿಂದ ಆಗುತ್ತಿರುವ ಪರಿಣಾಮಗಳಾಗಿವೆ ಎಂದ ಅವರು, ಆಹಾರದ ಕೊರತೆ ಎದುರಾದರೇ ಪರ್ಯಾಯ ಮಾರ್ಗಗಳನ್ನು ಕಂಡುಕೊಂಡು ನಿವಾರಿಸಬಹುದು. ಆದರೇ ಶುದ್ಧಗಾಳಿ ಸಿಗದಿದ್ದರೆ ಎಲ್ಲರ ಪ್ರಾಣಪಕ್ಷಿ ಹಾರಿ ಹೋಗುತ್ತವೆ. ಹಾಗಾಗಿ ಎಲ್ಲರೂ ಈಗಿನಿಂದಲೇ ಎಚ್ಚೆತ್ತುಕೊಂಡು ಗಿಡ ನೆಟ್ಟು ಸಂರಕ್ಷಣೆ ಮಾಡುವ ಮೂಲಕ ಪರಿಸರ ಉಳಿಸುವುದು ಅನಿವಾರ್ಯ ಸಂಗತಿ ಎಂದು ಸಲಹೆ ನೀಡಿದರು.

ಇದೇ ವೇಳೆ ಪರಿಸರ ಪ್ರೇಮಿ ಸಾಲಮರದ ನಾಗರಾಜು ಅವರನ್ನು ಸನ್ಮಾನಿಸಲಾಯಿತು.

ಇದಕ್ಕೂ ಮುನ್ನ ತಾಲೂಕು ಪಂಚಾಯಿತಿ ಕಚೇರಿ ಬಳಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ವಿಶ್ವಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಅಂಗವಾಗಿ ಪರಿಸರದ ಬಗ್ಗೆ ಅರಿವು ಜಾಗೃತಿ ಜಾಥಾವನ್ನು ಶಾಲಾ ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆರು ಹಾಗೂ ಅಧಿಕಾರಿಗಳು ಪಟ್ಟಣದ ಮುಖ್ಯರಸ್ತೆ ಮೂಲಕ ಅಂಬೇಡ್ಕರ್ ಭವನದವರೆಗೂ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ನಾಜೀಯಾ ಕೌಸರ್, ಕಾವ್ಯಶ್ರೀ, ವಕೀಲರ ಸಂಘದ ಅಧ್ಯಕ್ಷ ಸುಂದರ್, ಕಾರ್ಯದರ್ಶಿ ನಟೇಶ್, ಅಪರ ಸರ್ಕಾರಿ ವಕೀಲ ಶ್ರೀಕಂಠಸ್ವಾಮಿ, ಡಿವೈಎಸ್‌ಪಿ ಕೃಷ್ಣಪ್ಪ, ತಾ.ಪಂ ಇಒ ಶ್ರೀನಿವಾಸ್, ಬಿಇಒ ಉಮಾ, ಮುಖ್ಯಾಧಿಕಾರಿ ನಾಗರತ್ನಾ, ಸಮಾಜ ಕಲ್ಯಾಣಾಧಿಕಾರಿ ಸಂತೋಷ ಕುಮಾರ್, ಇನ್ಸ್‌ಪೆಕ್ಟರ್ ರವಿಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ವೀರಭದ್ರಪ್ಪ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net