ಡೆಂಘೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,224

Dengue -
Published on

ಬೆಂಗಳೂರು: ರಾಜ್ಯದಲ್ಲಿ ಶನಿವಾರ 454 ಹೊಸ ಡೆಂಘೆ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,224 ತಲುಪಿದೆ. ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 16,492ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 3,202 ಶಂಕಿತ ಡೆಂಘೆ ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಬೆಂಗಳೂರಿನಲ್ಲಿ 210, ಬೆಂಗಳೂರು ನಗರ 35, ದಕ್ಷಿಣ ಕನ್ನಡ 27, ಹಾವೇರಿ 26, ವಿಜಯಪುರ ಮತ್ತು ಬಾಗಲಕೋಟೆ ತಲಾ 20, ಕಲಬುರಗಿ 17 ಸೇರಿ 454 ಮಂದಿ ಡೆಂಘೆ ಪೀಡಿತರಾಗಿದ್ದಾರೆ.

ಸೋಂಕಿತರಲ್ಲಿ 2,652 ಮಂದಿ ಮನೆ ಆರೈಕೆಯಲ್ಲಿದ್ದು, 13 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net