ಡಾರ್ಕ್ ಚಾಕೊಲೇಟ್ ಆರೋಗ್ಯಕ್ಕೆ ಉತ್ತಮ

bhr 5
Published on

ಬಾಳೆಹೊನ್ನೂರು: ಡಾರ್ಕ್ ಚಾಕೊಲೇಟ್ ಮನುಷ್ಯನ ಆರೋಗ್ಯಕ್ಕೆ ಉತ್ತಮಕರವಾಗಿದ್ದು, ಆರೋಗ್ಯಕರ ಜೀವನ ಶೈಲಿಗೆ ಇದು ಸಹಾಯ ಮಾಡುತ್ತದೆ ಎಂದು ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಸಹನಾ ಯೋಗಿಶ್ ಹೇಳಿದರು.

ಪಟ್ಟಣದ ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆ ಆಯೋಜಿಸಿದ್ದ ಚಾಕೊಲೇಟ್ ದಿನಾಚರಣೆಯಲ್ಲಿ ಮಾತನಾಡಿ, ಡಾರ್ಕ್ ಚಾಕೊಲೇಟ್‌ನಲ್ಲಿ ಆ್ಯಂಟಿ ಆಕ್ಸಿಡೆಂಟ್‌ಗಳು ಹೇರಳವಾಗಿದ್ದು, ಇದು ಮಾನಸಿಕ ಒತ್ತಡ ಕಡಿಮೆ ಮಾಡಲು, ಚರ್ಮವನ್ನು ಕಾಂತಿಯುತಗೊಳಿಸಲು ಮತ್ತು ಹೃದಯದ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ.

ಚಾಕೊಲೇಟ್ ಸೇವನೆಯಿಂದ ನಮ್ಮ ದೇಹವು ದಿನ ಪೂರ್ತಿ ಲವಲವಿಕೆಯಿಂದ ಇರಲು ಸಹಾಯ ಮಾಡುತ್ತದೆ. ನಮ್ಮ ದೇಹಕ್ಕೆ ಸೂರ್ಯನ ಹಾನಿಯಿಂದ ರಕ್ಷಿಸುತ್ತದೆ. ಮೆದುಳಿನ ಕಾರ್ಯವನ್ನು ಸುಧಾರಿಸುವುದರೊಂದಿಗೆ ಏಕಾಗ್ರತೆ ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ. ಡಾರ್ಕ್ ಚಾಕೊಲೇಟ್ ರಕ್ತದೊತ್ತಡ ಸಮತೋಲನದಲ್ಲಿಡಲು ಸಹ ಸಹಾಯ ಮಾಡುತ್ತದೆ. ಆರೋಗ್ಯಕ್ಕೆ ಪೂರಕವಾಗಿರುವ ಚಾಕೊಲೇಟ್‌ಗಳನ್ನು ಮನೆಗಳಲ್ಲಿಯೇ ಗುಣಮಟ್ಟದಲ್ಲಿ ತಯಾರಿಸಿ ಸೇವಿಸಿದರೆ ಇನ್ನಷ್ಟು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಜೇಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ, ನಿಕಟಪೂರ್ವ ಅಧ್ಯಕ್ಷ ಎನ್.ಶಶಿಧರ್, ಕಾರ್ಯದರ್ಶಿ ವಿ.ಅಶೋಕ್, ಜ್ಯೂನಿಯರ್ ಜೇಸಿ ಅಧ್ಯಕ್ಷ ನಿಶ್ಚಿತ್ ಹಿಲರಿ ಮಿಸ್ಕಿತ್, ಪೂರ್ವಾಧ್ಯಕ್ಷ ಚೈತನ್ಯ ವೆಂಕಿ, ಸುಧಾಕರ್, ಸುರೇಂದ್ರ, ಸಿ.ಪಿ.ರಮೇಶ್, ಸದಸ್ಯರಾದ ಕೆ.ಪ್ರಶಾಂತ್‌ಕುಮಾರ್, ಸಿ.ವಿ.ಸುನೀಲ್, ಪ್ರಕಾಶ್ ಮುದುಗುಣಿ, ಯು.ಸಿ.ಪ್ರದೀಪ್, ಇನ್ನರ್‌ವ್ಹೀಲ್ ಸದಸ್ಯರಾದ ಕವಿತಾ ಕೇಶವ್, ಸುಪ್ರಿಯಾ ರಮೇಶ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net