

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ನಾಳೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಭರ್ಜರಿ ಪ್ರಚಾರ ನಡೆಯಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸುಮಲತಾ ಪರ ಸತತ ಪ್ರಚಾರ ನಡೆಸಿ, ಅವರ ಗೆಲುವಿನಲ್ಲಿ ಮುಖ್ಯಪಾತ್ರ ವಹಿಸಿದ್ದ ನಟ ದರ್ಶನ್ ನಾಳೆ ಆರ್.ಆರ್.ನಗರ ಕಣಕ್ಕಿಳಿಯಲಿದ್ದಾರೆ.
ಮುನಿರತ್ನ ಅವರ ಪರ ನಾಳೆ ದರ್ಶನ್ ರೋಡ್ ಶೋ ನಡೆಸಿ ಮತಯಾಚನೆ ಮಾಡಲಿದ್ದಾರೆ. ಕ್ಷೇತ್ರಾದ್ಯಂತ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಹಾಗೇ ಕಾಂಗ್ರೆಸ್ ಅಭ್ಯರ್ಥಿ ಪರ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬೆಳಗ್ಗೆಯಿಂದ ಸಂಜೆವರೆಗೂ ಪ್ರಚಾರ ನಡೆಸಲಿದ್ದಾರೆ. (ಏಜೆನ್ಸೀಸ್)