ಸಂಕ್ರಾಂತಿಗೆ ಶುಭ ಸುದ್ದಿ ಹಂಚಿಕೊಂಡ ದರ್ಶನ್

Darshan
Published on

ಮೈಸೂರು: ನಗರದ ಹೊರವಲಯದ ತೋಟದ ಮನೆಯಲ್ಲಿ ಮಕರ ಸಂಕ್ರಾಂತಿ ಆಚರಿಸಿಕೊಂಡ ಬಳಿಕ ಫೋಟೋವನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನಟ ದರ್ಶನ್ ಹಂಚಿಕೊಂಡಿದ್ದಾರೆ. ದರ್ಶನ್ ತಮ್ಮ ನೆಚ್ಚಿನ ಕುದುರೆಗೆ ಹೂವಿನ ಹಾರ ಹಾಕಿ ಅದರ ಬಳಿ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ.

‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂಬ ಸಂದೇಶ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net