

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಜೈಲೂಟದಿಂದಾಗಿ ಫುಡ್ ಪಾಯಿಸನಿಂಗ್ ಹಾಗೂ ಅತಿಸಾರ ಆಗುತ್ತಿದೆ. ಒಂದು ಕಡೆ ಜಿಮ್‌ನಲ್ಲಿ ವರ್ಕೌಟ್ ಇಲ್ಲ, ಸರಿಯಾದ ಆಹಾರ ಕೂಡ ಇಲ್ಲ. ಇದರಿಂದ ತೂಕ ಕಳೆದುಕೊಂಡು ಮಾನಸಿಕವಾಗಿ ದರ್ಶನ್ ಕುಗ್ಗಿ ಹೋಗುತ್ತಿದ್ದಾರೆ. ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ವಿಚಾರಣೆಯನ್ನು ಜುಲೈ18ಕ್ಕೆ ಮುಂದೂಡಲಾಗಿದೆ.
ನಿನ್ನೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೇಶ್ ಸೇರಿದಂತೆ ಕುಟುಂಬಸ್ಥರು ಭೇಟಿ ಮಾಡಿದ್ದರು. ದರ್ಶನ್ ಭೇಟಿಯಾಗಿ ವಿಜಯಲಕ್ಷ್ಮಿ ಧೈರ್ಯ ತುಂಬಿ ಬಂದಿದ್ದರು. ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಮಗ ವಿನೀಶ್ ಕಣ್ಣೀರು ಹಾಕಿದ್ದಾನೆ ಎನ್ನಲಾಗಿದೆ.
ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಮಗ ಕಣ್ಣೀರು ಹಾಕಿದ್ದಾನೆ. ಮಗನನ್ನು ಅಪ್ಪಿಕೊಂಡು ದರ್ಶನ್ ಕೂಡ ಕಣ್ಣೀರು ಹಾಕಿ ಬಾವುಕರಾಗಿದ್ದಾರೆ. ಪತ್ನಿಯ ಬಳಿ ಜೈಲೂಟ ಮಾಡಲು ಆಗುತ್ತಿಲ್ಲ ಎಂದು ದರ್ಶನ್ ಹೇಳಿದ್ದಾರೆ ಎನ್ನಲಾಗಿದೆ.
ಜಾಮೀನು ಪ್ರಕ್ರಿಯೆ ಬಗ್ಗೆಯೂ ಕುಟುಂಬಸ್ಥರ ಜತೆಗೆ ಚರ್ಚೆ ಮಾಡಿದ್ದಾರೆ. ಮಗನನ್ನ ತೊಡೆಯ ಮೇಲೆ ಕೂರಿಸಿಕೊಂಡು ಕೆಲಹೊತ್ತು ದರ್ಶನ್ ಮಾತನಾಡಿಸಿದ್ದಾರೆ. ಮಗನನ್ನು ಕಂಡು ಕೊಂಚ ನಿರಾಳವಾಗಿದ್ದಾರೆ. ಮತ್ತೆ ರಾತ್ರಿಯಾಗುತ್ತಿದ್ದಂತೆ ಮೌನಕ್ಕೆ ಶರಣಾಗಿದ್ದಾರೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್ ಕೈವಾಡ ಇದೆ. ದರ್ಶನ್ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಏನಿದು ಪ್ರಕರಣ?