

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮಗಳ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಫೆ. 18ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಅನುಷ್ಠಾನದ ಬಗ್ಗೆ ಎಲ್ಲ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಜರುಗಿಸಲಿದ್ದಾರೆ.
ಸಭೆಯಲ್ಲಿ ಅಂಗವಿಕಲತೆಯನ್ನು ಪತ್ತೆ ಹಚ್ಚುವ ಕಾರ್ಯಕ್ರಮದ ಪರಿಶೀಲನೆ, ಅಂಗವಿಕಲರಿಗೆ ಸ್ಥಾಪಿಸಿರುವ ವಿಶೇಷ ನ್ಯಾಯಾಲಯಗಳ ಬಗ್ಗೆ ಪರಿಶೀಲನೆ, ಶೇ. 5ರ ಮಿಸಲಾತಿ ಪರಿಶೀಲನೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.