ರಂಗಾಯಣ ನಿರ್ದೇಶಕ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ದಸಂಸ ಪ್ರತಿಭಟನೆ

Dasamsa protest demanding dismissal of Rangayana director cariappa
Published on

ಮೈಸೂರು: ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ರಚಿಸಿರುವ ‘ಟಿಪ್ಪುವಿನ ನಿಜ ಕನಸುಗಳು’ ನಾಟಕ ಕೃತಿಯನ್ನು ನಿಷೇಧಿಸಬೇಕು, ನಾಟಕ ಪ್ರದರ್ಶನವನ್ನು ತಡೆ ಹಿಡಿಯಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ರಂಗಾಯಣ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಲಾಯಿತು. ದಸಂದ ಮುಖಂಡರಾದ ಚೋರನಹಳ್ಳಿ ಶಿವಣ್ಣ, ಕೆ.ವಿ. ದೇವೇಂದ್ರ, ಕಿರಂಗೂರು ಸ್ವಾಮಿ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net