ದಸರಾ ಕಲಿಕಾ ಶಿಬಿರ ಸಮಾರೋಪ

26 HANUR 1
Published on

ಹನೂರು: ತಾಲೂಕಿನ ಬಸಪ್ಪನದೊಡ್ಡಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಎಲ್‌ಟಿಐ ಮೈಂಡ್ ಟ್ರೀ ಸಂಸ್ಥೆ ವತಿಯಿಂದ ಆಯೋಜಿಸಿದ್ದ ದಸರಾ ಕಲಿಕಾ ಶಿಬಿರ ಗುರುವಾರ ಸಮಾರೋಪಗೊಂಡಿತು.
15 ದಿನಗಳ ಕಾಲ ಆಯೋಜಿಸಿದ್ದ ಈ ಶಿಬಿರದಲ್ಲಿ ಮಕ್ಕಳಿಗೆ ಹಾಡು, ನೃತ್ಯ, ರಂಗೋಲಿ, ಚಿತ್ರಕಲೆ ಹಾಗೂ ಇನ್ನಿತರ ಆಟೋಟದ ಸ್ಪರ್ಧೆ ಆಯೋಜಿಸಲಾಗಿತ್ತು. ಬರವಣಿಗೆ ಕೌಶಲ, ಕಂಪ್ಯೂಟರ್ ಬಳಕೆ, ಪ್ಲಾಸ್ಟಿಕ್ ನಿಷೇಧ ಕುರಿತು ಅರಿವು ಕಾರ್ಯಕ್ರಮ ಹಾಗೂ ಸಾಮಾಜದ ಬದಲಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಯಿತು. ಇದರ ಜತೆಗೆ ಗ್ರಾಮ ಪಂಚಾಯಿತಿ ಗ್ರಂಥಾಲಯ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಬ್ಯಾಂಕ್‌ಗಳಿಗೆ ಭೇಟಿ ನೀಡಿ ಇಲ್ಲಿನ ಪ್ರಯೋಜನದ ಬಗ್ಗೆ ಮಾಹಿತಿ ತಿಳಿಸಲಾಯಿತು. ಈ ಮೂಲಕ ಮಕ್ಕಳು ಶಿಬಿರದ ಪ್ರಯೋಜನ ಪಡೆದುಕೊಂಡರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ತಾಲೂಕು ಸಂಯೋಜಕರಾದ ದಿಲೀಪ್ ಹಾಗೂ ವೆಂಕಟೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net