ಅಬ್ಬಿಗೇರಿಯಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನ

rambhapuri Shri new
Published on

ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ 33ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಶ್ರೀಅನ್ನದಾನೇಶ್ವರ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಿದ ಮಾನವ ಧರ್ಮ ಮಂಟಪದಲ್ಲಿ ಅ.3ರಿಂದ 12ರವರೆಗೆ ನಡೆಯಲಿದೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.
ಅ.3ರಂದು ಕೇಂದ್ರ ಜಲಶಕ್ತಿ ಹಾಗೂ ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ದಸರಾ ಧರ್ಮ ಸಮ್ಮೇಳನ ಉದ್ಘಾಟಿಸುವರು. ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯ ವಹಿಸಲಿದ್ದರೆ. ಅ.4ರಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ರಂಭಾಪುರಿ ಬೆಳಗು ಸಂಚಿಕೆ ಬಿಡುಗಡೆ ಮಾಡುವರು. ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ರಾಮಣ್ಣ ದೊಡ್ಡಮನಿ, ಟಿ.ಈಶ್ವರ, ಚಿತ್ರನಟ ದೊಡ್ಡಣ್ಣ, ದೇವರಮನೆ ಶಿವಕುಮಾರ ಭಾಗವಹಿಸುವರು.
ಅ.5ರಂದು ಗುರು ಇಂಗ್ಲಿಷದ ಕೃತಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಬಿಡುಗಡೆ ಮಾಡುವರು. ಮಹಿಳಾ ಮತ್ತು ಮಕ್ಕಳ ಅಭಿವವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು ಭಾಗವಹಿಸಲಿದ್ದಾರೆ. ಅ.6ರಂದು ಸಂಸದ ಜಗದೀಶ ಶೆಟ್ಟರ್, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಅನ್ವರಿ, ಶಾಸಕ ಸಿ.ಸಿ.ಪಾಟೀಲ, ಪದ್ಮಶ್ರೀ ವಿಜಯ ಸಂಕೇಶ್ವರ, ಎಂ.ಕೆ.ಪಟ್ಟಣ ಶೆಟ್ಟಿ, ವಿಜಯ ಬಾಬಣ್ಣ ಮೆಟಗುಡ್ಡ ಭಾಗವಹಿಸಲಿದ್ದಾರೆ.
ಅ.7ರಂದು ಬಾಲಕ-ಪಾಲಕ-ಶಿಕ್ಷಕರ ನೀತಿ ಸಂಹಿತೆ ಕೃತಿಯನ್ನು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಬಿಡುಗಡೆ ಮಾಡುವರು. ಅರಣ್ಯಸಚಿವ ಈಶ್ವರ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ಮಹಾಂತೇಶ ಕವಟಗಿಮಠ ಪಾಲ್ಗೊಳ್ಳಲಿದ್ದಾರೆ. 8 ರಂದು ಕಾವ್ಯ ಕುಸುಮ ಕೃತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡುವರು. ಮಾಜಿ ಸಂಸದ ಸಂಗಣ್ಣ ಕರಡಿ, ಶಾಸಕ ನೇಮಿ ನಾಯಕ, ಮಾಜಿ ಶಾಸಕ ಡಿ.ಆರ್.ಪಾಟೀಲ, ಆನಂದಸ್ವಾಮಿ ಗಡ್ಡದ್ದೇವರಮಠ, ಸಂಯುಕ್ತ ಕಳಕಪ್ಪ ಬಂಡಿ ಪಾಲ್ಗೊಳ್ಳಲಿದ್ದಾರೆ.
ಅ.9ರಂದು ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ಜಗದೀಶ ಗುಡಗುಂಟಿಮಠ, ಶರಣು ಸಲಗರ ಪಾಲ್ಗೊಳ್ಳಲಿದ್ದಾರೆ. ಅ.10ರಂದು ಶಾಸಕರಾದ ಭರತ ರೆಡ್ಡಿ, ಮಾನಪ್ಪ ಡಿ.ವಜ್ಜಲ, ಟಿ.ಡಿ.ರಾಜೇಗೌಡ, ಮಾಜಿ ಸಚಿವ ಎಸ್.ಎಸ್.ಪಾಟೀಲ, ಮಾಜಿ ಶಾಸಕರಾದ ಅಮರೇಗೌಡ ಬಯ್ಯಪುರ, ವೀರಣ್ಣ ಮತ್ತೀಕಟ್ಟಿ ಭಾಗವಹಿಸುವರು. 11ಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರುದ್ರಗಣಾಪ ವೀರಭದ್ರ ಕೃತಿಯನ್ನು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಶ್ರೀ ಪೀಠದ ವಾರ್ತಾ ಸಂಕಲನ ಬಿಡುಗಡೆ ಮಾಡುವರು.
ಅ.7ರಂದು ರೋಣ ಕೃಷಿ ಇಲಾಖೆಯ ಸಹಕಾರದೊಂದಿಗೆ ಕೃಷಿ ಮೇಳ ನಡೆಯಲಿದೆ. ಅ.8ರಂದು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net