ದಸರಾ ಚಲನಚಿತ್ರೋತ್ಸವ ಪೋಸ್ಟರ್ ಬಿಡುಗಡೆ

mysore
Published on

ಮೈಸೂರು: ದಸರಾ ಚಲನಚಿತ್ರೋತ್ಸವ ಪೋಸ್ಟರ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.


ಅ.4ರಿಂದ 10ರ ವರೆಗೆ 7 ದಿನ ನಡೆಯಲಿರುವ ಚಲನಚಿತ್ರೋತ್ಸವದಲ್ಲಿ 112 ಸಿನಿಮಾಗಳು ಹುಣಸೂರು ರಸ್ತೆಯ ಡಿಆರ್‌ಸಿಯ ಒಂದು ಪರದೆ ಮತ್ತು ಮಾಲ್ ಆಫ್ ಮೈಸೂರಿನ ಐನಾಕ್ಸ್‌ನ ಮೂರು ಪರದೆಗಳಲ್ಲಿ ಪ್ರದರ್ಶನವಾಗಲಿವೆ.


ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮುಡಾ ಅಧ್ಯಕ್ಷ ಕೆ.ಮರಿಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್‌ಪಿ ವಿಷ್ಣುವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net