ಸಿದ್ದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 8ರಂದು

sdp sports
Published on

ಸಿದ್ದಾಪುರ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.8ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ತಾಪಂ ಇಒ ದೇವರಾಜ ಹಿತ್ತಲಕೊಪ್ಪ ಹೇಳಿದರು.

ಸ್ಥಳೀಯ ತಾಪಂ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕ್ರೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪಟ್ಟಣದ ಎಂಜಿಸಿ ಮಹಾವಿದ್ಯಾಲಯದ ಸಮೀಪ ಇರುವ ತಾಲೂಕು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸುವರು. ಆರೋಗ್ಯ, ಪೊಲೀಸ್ ಇಲಾಖೆಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಶಿಕ್ಷಣ ಇಲಾಖೆ ಪಂದ್ಯದ ನಿರ್ಣಾಯಕರನ್ನು ಕಳುಹಿಸುತ್ತಾರೆ. ತಾಲೂಕಿನ ಯುವಕ-ಯುವತಿಯರು ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ತಾಲೂಕು ಯುವ ಒಕ್ಕೂಟದವರು ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಮಾಧವ ನಾಯ್ಕ ಮಾತನಾಡಿ, ದಸರಾ ಕ್ರೀಡಾಕೂಟ ನಾಲ್ಕು ಹಂತದಲ್ಲಿ ನಡೆಯಲಿದೆ. ತಾಲೂಕು ಮಟ್ಟದಲ್ಲಿ ವಿಜೇತರಾದವರು ಜಿಲ್ಲಾಮಟ್ಟ, ವಿಭಾಗೀಯ ಮಟ್ಟ ಹಾಗೂ ರಾಜ್ಯಮಟ್ಟಕ್ಕೆ ಹೋಗುವ ಅವಕಾಶ ಇದೆ. ಈ ವರ್ಷದಿಂದ ಯೋಗ ಸ್ಪರ್ಧೆಯನ್ನೂ ಆಯೋಜಿಸಲಾಗಿದೆ. ವಿಜೇತರಿಗೆ ಪ್ರಮಾಣ ಪತ್ರ, ಪಾರಿತೋಷಕ ನೀಡಲಾಗುತ್ತದೆ ಎಂದರು. ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಅಣ್ಣಪ್ಪ ನಾಯ್ಕ ಶಿರಳಗಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net