ಬೆಂಗಳೂರಿನಲ್ಲಿ ಜು.31 ರಂದು ದಸರಾ ಉನ್ನತ ಮಟ್ಟದ ಸಭೆ

mysuru dasara
Published on

ಮೈಸೂರು: ನಾಡಹಬ್ಬ ದಸರಾ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಜು.31 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಭೆ ನಡೆಯಲಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಂದು ಸಂಜೆ 4ಕ್ಕೆ ಸಭೆ ಏರ್ಪಡಿಸಲಾಗಿದ್ದು, ಸಂಬಂಧಿಸಿದವರಿಗೆಲ್ಲ ಆಹ್ವಾನ ಪತ್ರ ಹೊರಡಿಸುವಂತೆ ಮೈಸೂರು ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. ಮುಖ್ಯಮಂತ್ರಿ ಸಲಹೆಯಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಈಗಾಗಲೇ ದಸರಾ ಉತ್ಸವಕ್ಕೆ ನೀಲನಕ್ಷೆ ಸಿದ್ಧಪಡಿಸಿದ್ದು, ಅದನ್ನು ಅಂದಿನ ಸಭೆಯಲ್ಲಿ ಮಂಡಿಸಲಿದ್ದಾರೆ.

ಕಾವೇರಿ ಜಲಾನಯನ ಭಾಗದ ಬಹತೇಕ ಜಲಾಶಯಗಳು ಭರ್ತಿಯಾಗುತ್ತಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ದಸರಾ ಉತ್ಸವ ಆಚರಿಸುವ ಸಾಧ್ಯತೆ ಇದೆ. ಉನ್ನತ ಮಟ್ಟದ ಸಭೆಯಲ್ಲಿ ದಸರಾ ಉತ್ಸವ ಉದ್ಘಾಟನೆಗೆ ಯಾರನ್ನು ಕರೆಯಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೆ, ದಸರಾ ಉತ್ಸವದ ಪ್ರಮುಖ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಲಿದೆ.
-------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net