ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಸೆ.25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಅಂತೆಯೇ ಈ ಬಾರಿಯ ದಸರಾವನ್ನು ಚಿತ್ರ ನಿರ್ದೇಶಕ ಟಿ.ಎಸ್.ನಾಗಭರಣ ಮಾಡಲಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಲೋಗೋ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಈ ಬಾರಿಯ ಕಾರ್ಯಕ್ರಮಗಳನ್ನು ಸಹ ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ.25 ರಂದು ಉದ್ಘಾಟನೆ ಹಾಗೂ 28 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೇರಿದಂತೆ ಇತರರಿದ್ದರು.