ಸೆ.10ಕ್ಕೆ ದಸರಾ ಆಯ್ಕೆ ಕ್ರೀಡಾಕೂಟ

sports
Published on

ಸಾಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಸೆ.10ರಂದು ಬೆಳಗ್ಗೆ 9 ಗಂಟೆಯಿAದ ನೆಹರು ಮೈದಾನದಲ್ಲಿ ತಾಲೂಕು ಮಟ್ಟದ ದಸರಾ ಆಯ್ಕೆ ಕ್ರೀಡಾಕೂಟ ನಡೆಯಲಿದೆ. ಅಥ್ಲೆಟಿಕ್ಸ್, ಖೋ-ಖೋ, ಕಬ್ಬಡಿ, ವಾಲಿಬಾಲ್, ಥ್ರೋಬಾಲ್ ಇತರ ಪಂದ್ಯಾವಳಿಗಳು ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ತಾಲೂಕಿನವರು ಮಾತ್ರ ಭಾಗವಹಿಸಲು ಅವಕಾಶವಿದೆ. ಆಸಕ್ತರು ಸ್ಥಳದಲ್ಲಿಯೇ ಹೆಸರು ನೊಂದಾಯಿಸಿಕೊಳ್ಳಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net